ಯುಗಪುರುಷಕ್ಕೆ ಕೋ.ಮ.ಕಾರಂತ ಪ್ರಶಸ್ತಿ

ನಿರಂತರ ಹಲವಾರು ವರ್ಷಗಳಿಂದ ಸಾಹಿತ್ಯದ ಸೇವೆ ಸಲ್ಲಿಸುತ್ತಿರುವ ಯುಗಪುರುಷಕ್ಕೆ ಕುಂದಾಪುರದ ಕುಂದಪ್ರಭ ಸಂಸ್ಥೆಯವರು ವರ್ಷಂಪ್ರತಿ ನೀಡುವ ಕೋ.ಮ.ಕಾರಂತ ಪ್ರಶಸ್ತಿ ಲಭಿಸಿದೆ. ಜನವರಿ 1ರಂದು ಕುಂದಾಪುರದ ರೋಟರಿ ಲಕ್ಷ್ಮೀ ಕಲಾಮಂದಿರದಲ್ಲಿ ಜರಗಿದ ಸಮಾರಂಭದಲ್ಲಿ ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕಾಸರಗೋಡು ಚಿನ್ನಾ, ಕ.ಸಾ.ಪ. ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಹಿರಿಯ ಸಾಹಿತ್ಯ ಕೆ.ವಿ. ಕೃಷ್ಣಯ್ಯ, ದತ್ತಾನಂದ ಗಂಗೊಳ್ಳಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕಿರಣ್ ಮಂಜನಬೈಲು, ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷ ಬಿ.ಶಂಕರ ಶೆಟ್ಟಿ, ಹಿರಿಯ ಕಲಾವಿದ ಭೋಜ ಹಾಂಡ, ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್.ಶೆಣೈ, ಕೋ.ರಮಾನಂದ ಕಾಮತ್, ಪಿ.ಜಯವಂತ ಪೈ ಮೊದಲಾದವರು ಉಪಸ್ಥಿತರಿದ್ದರು.

 

Comments

comments

Leave a Reply

Read previous post:
ಮುಖ್ಯಮಂತ್ರಿಗಳಿಗೆ ಮನವಿಗಳ ಸರಮಾಲೆ

Narendra Kerekadu ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಮುಲ್ಕಿ ತಾಲ್ಲೂಕು ರಚನೆಯ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಬಳಿ ಇಲ್ಲ ಎಂದು ರಾಜ್ಯ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು....

Close