ಉಚಿತ ದಂತ ತಪಾಸಣೆ ಮತ್ತು ಮಾಹಿತಿ ಶಿಬಿರ

ರೋಟರಿ ಕ್ಲಬ್ ಕಿನ್ನಿಗೋಳಿ, ರೋಟರಾಕ್ಟ್ ಕ್ಲಬ್ ಕಿನ್ನಿಗೋಳಿ ಹಾಗೂ ನಮ್ಮಕಿನ್ನಿಗೋಳಿ ಡಾಟ್ ಕಾಂ ಇವರ ಜಂಟೀ ನೇತೃತ್ವದಲ್ಲಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಉಲ್ಲಂಜೆಯಲ್ಲಿ ದೇರಳಕಟ್ಟೆ ಎ.ಬಿ.ಶೆಟ್ಟಿ ಮೆಮೋರಿಯಲ್ ದಂತ ವೈದ್ಯ ಕಾಲೇಜಿನ ತಜ್ಞ ವೈದ್ಯರಿಂದ ಮಕ್ಕಳಿಗೆ ಉಚಿತ ದಂತ ತಪಾಸಣೆ ಮತ್ತು ಮಾಹಿತಿ ಶಿಬಿರ ನಡೆಯಿತು. ಯುಗಪುರುಷದ ಭುವನಾಭಿರಾಮ ಉಡುಪ ಶಿಬಿರವನ್ನು ಉದ್ಘಾಟಿಸಿದರು. ದಂತ ವೈದ್ಯರಾದ ಡಾ| ಅಮಿತ್ ಅಡ್ಯಂತಾಯ ದಂತ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಗಣೇಶ್ ಕಾಮತ್, ಕೆ.ಬಿ.ಸುರೇಶ್, ಸುಮಿತ್ ಕುಮಾರ್, ನಮ್ಮಕಿನ್ನಿಗೋಳಿ ಡಾಟ್ ಕಾಂ ನ ಯಶವಂತ ಎ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಯಾನಂದ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಜಯರಾಮ ಪೂಂಜ ಸ್ವಾಗತಿಸಿ ಪ್ರಸ್ತಾವನೆಗೈದರು. ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್. ಭಟ್ ವಂದಿಸಿದರು. ಶಿಕ್ಷಕಿ ಜೆಸಿಂತ ಡಿ’ಸೋಜ ಖಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ಸೈಂಟ್ ಮೇರಿಸ್ ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವವು ಜನವರಿ ೧೦ ರಂದು ಮಂಗಳವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ ೯.೩೦ಕ್ಕೆ ಮೆನ್ನಬೆಟ್ಟು ಗ್ರಾಮ ಪಂಚಾಯತ್...

Close