ಮನೆಯೊಳಗಿಲ್ಲ ಒಲೆ, ಹೊರಗೆ ಹೊಗೆ

Mithuna Kodethoor

ಅಲ್ಲಿ ದೂರದಲ್ಲೆಲ್ಲೋ ಹೊಗೆ ಕಾಣಿಸುತ್ತಿದ್ದರೆ ಮನೆಯಿದೆ ಅಂತ ನಿರ್ಜನ ಪ್ರದೇಶದಲ್ಲಿ, ಗುಡ್ಡ ಗಾಡಿನಲ್ಲಿ, ಕಾಡಿನಲ್ಲಿ ನಡೆದುಕೊಂಡು ಹೋಗುತ್ತಿದ್ದವರು ಲೆಕ್ಕಾಚಾರ ಹಾಕುತ್ತಿದ್ದರು. ಮನೆಯಿದ್ದರೆ ಅಲ್ಲಿಮಂದಿಯಿರುತ್ತಾರೆ, ಅವರಿದ್ದರೆ ಅಡುಗೆಯ ಒಲೆಯೋ, ಬಚ್ಚಲಿನ ಒಲೆಯೋ, ಭತ್ತ ಕಾಯಿಸುವಒಲೆಯೋ ಉರಿಯುತ್ತಲಿರುತ್ತದೆ. ಒಲೆ ಯಿಲ್ಲದಮನೆಯಿದ್ದರೆ ಅದು ಅಚ್ಚರಿಯ ಸಂಗತಿಯೇ! ಮನೆಯೇಲ್ಲದಿದ್ದರೂ,ಕಟ್ಟಿಕೊಂಡಿರುವ ಜೋಪಡಿಪಕ್ಕದಲ್ಲೊಂದು ಒಲೆ ಉರಿಯುತ್ತಿರುತ್ತಿದೆ. ಆದರೆ ಈಗ ಒಲೆಗಳಿಲ್ಲದ, ಹೊಗೆಯೂ ಇಲ್ಲದ ದಿನಗಳು ಬಂದಿವೆ! ಈಗ ಸೀಮೆ ಎಣ್ಣೆಸ್ಟೌವ್‌ಗಳು ಕೂಡ ಹಳತಾಗಿವೆ. ಗ್ಯಾಸ್‌ಹಂಡೆಗಳು ಮನೆಗಳನ್ನು ಆವರಿಸಿವೆ. ಪೇಟೆಗಳ ಮನೆಗಳಿಗೆವಿದ್ಯುತ್ ಒಲೆ ಬಂದಿದೆ. ಸೌರಶಕ್ತಿಯ ಒಲೆಯೂ ಬಂದಿದೆ. ಆದರೆ ಕಟ್ಟಿಗೆಯನ್ನು ಉಪಯೋಗಿಸಿಬೇಯಿಸುವ, ಕಾಯಿಸುವ ಒಲೆ ಇಲ್ಲವಾಗುತ್ತಿದೆ.ಕಟ್ಟಿಗೆಯ ಜೊತೆಗೆ ಸೆಗಣಿಯ ತಟ್ಟಿ, ಒಣಗಿಸಿದಬೆರಣಿಯಿಂದ ಬೆಂಕಿ ಉರಿಸಲಾಗುತ್ತಿತ್ತು. ಕಡಿಮೆ ಕಟ್ಟಿಗೆ ಅಥವಾ ಮರದ ಚೂರುಗಳನ್ನು ಬಳಸಿ,ಪೇಪರ್, ಕಸ ಗಳನ್ನು ಬಳಸಿ ಬೆಂಕಿಯಿಂದ ಕಾಯಿಸುವ, ಬೇಯಿಸುವ ಒಲೆಗಳೂ ಬಂದಿದ್ದವು. ಆದರೂಅವು ಕಟ್ಟಿಗೆಯಷ್ಟು ಜನಪ್ರಿಯವಾಗಲಿಲ್ಲ. ನಗರಗಳಲ್ಲಿ ಕಟ್ಟಿಗೆ ಒಲೆಗಳನ್ನು ಬಳಸುವುದು ಕಷ್ಟವೇ.

ಆದರೆ ಇತ್ತೀಚಿಗೆ ಅಭಿವೃದ್ಧಿಯ ವೇಗಕ್ಕೆ ಹಳ್ಳಿಗಳಲ್ಲೂ ಸೌದೆ ಉರಿಸುವ ಒಲೆಗಳು ಕಾಣೆ ಯಾಗುತ್ತಿವೆ.ಅಲ್ಲಿಗೆ ಗ್ಯಾಸ್ ಸ್ಟೌವ್ ಬಂದು ಕೂರುತ್ತಿದೆ. ಸೂರ್ಯಶಕ್ತಿಯ ಒಲೆಗಳು ನೀರು ಬಿಸಿ ಮಾಡಲುವಿದ್ಯುತ್‌ಗೆ ಓಕೆ. ಆದರೆ ಅಡುಗೆಗೆ ಮಳೆಗಾಲಗಳಲ್ಲಿ ಕಷ್ಟ. ಇನ್ನು ವಿದ್ಯುತ್ ಒಲೆಗಳು ಹೆಚ್ಚು ವೆಚ್ಚವನ್ನುಬಯಸುತ್ತವೆ. ಕಟ್ಟಿಗೆಗೆ ಪರಿಸರ ನಾಶವಾಗುತ್ತದೆ ಎಂಬುದು ಹೌದಾದರೂ ಈ ಒಲೆಗಳ ಮುಂದಿನಸಂಭ್ರಮ ಅನುಭವಿಸಿದವರಿಗಷ್ಟೇ ಗೊತ್ತು.ಗಡಗಡ ನಡುಗುವ ಚಳಿಗೆ ಬೆಂಕಿ ಹಾಕಿ ಒಲೆ ಮುಂದೆಕೂತರೆ ವಾಹ್ ಪರಮಾದ್ಭುತ ಸುಖ. ಕೆಲವರು ಹೇಳುವುದುಂಟು ಕಟ್ಟಿಗೆ ಒಲೆಯಲ್ಲಿ ಮಾಡುವ ಚಹಾ,ಕಾಫಿಯ ಸ್ವಾದಿಷ್ಟ, ರುಚಿಯೇ ಬೇರೆ ಅಂತ. ಒಲೆ ಮುಂದೆ ಕೂತು ಹುಹೂಹೂ ಅಂತ ಊದುಕೊಳವೆಯಿಂದಗಾಳಿ ಊದೀ ಊದಿಕೆಂಡ ದಿಂದಹೊಗೆಯನ್ನೂ,ಬೆಂಕಿಯನ್ನೂ ಹುಟ್ಟಿಸಿ,ಅದರಲ್ಲಿ ಪಾತ್ರೆಯಿಟ್ಟುಹಾಲನ್ನೋ, ಅನ್ನವನ್ನೋ, ಸಾರನ್ನೋ, ಪಾಯಸವನ್ನೋಮಾಡುವ ರೀತಿ ಇನ್ನುನೆನಪುಗಳು ಮಾತ್ರ.

ಸಣ್ಣ ಒಲೆ, ಮಧ್ಯಮಒಲೆ, ದೊಡ್ಡಒಲೆಗಳನ್ನು ಕಲ್ಲು ಇಟ್ಟುಕಟ್ಟಿ, ಅದಕ್ಕೆಸೆಗಣಿಯನ್ನೋ ಸಿಮೆಂಟನ್ನೋ ಬಳಿದು ರಚಿಸುವ ಕಾಯಕ ಗ್ರಾಮೀಣ ಬದುಕು ದೂರ ವಾದಂತೆಕಡಿಮೆಯಾಗುತ್ತಲೇ ಹೋಗುತ್ತಿದೆ.ಫೋನು, ಮೊಬೈಲು, ಇಂಟರ್‌ನೆಟ್‌ಗಳೆಲ್ಲ ಬಂದ ಮೇಲೆ ಓಲೆಗಳುಕಡಿಮೆಯಾದಂತೆ, ಕಟ್ಟಿಗೆ ಒಲೆಗಳೂ ಆಧುನಿಕತೆಯ ಹೊಡೆತಕ್ಕೆ ಓಡಿ ಹೋಗುತ್ತಿವೆ………!

Comments

comments

Leave a Reply

Read previous post:
ಕಿನ್ನಿಗೋಳಿ ವಲಯದ ಬಸ್ಸು ಮಾಲಕರ ಸಂಘದ ಉದ್ಘಾಟನೆ

"ಬಸ್ಸು ಮಾಲಕರು ನಿಸ್ವಾರ್ಥ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಸಾರ್ವಜನಿಕರ ವಿಶ್ವಾಸ ಗಳಿಸಬೇಕಾಗಿದೆ"ಯೆಂದು ಕಟೀಲಿನ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು. ಅವರು ಬುಧವಾರ ಅನುಗ್ರಹ ಸಭಾಗೃಹದಲ್ಲಿ ಮಂಗಳೂರಿನ...

Close