ಕಿನ್ನಿಗೋಳಿಯಲ್ಲಿ ಕೀಟರೋಗ ನಿಯಂತ್ರಣ ಮಾಹಿತಿ

ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಮಂಗಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಮಂಗಳೂರು ಪ್ರಗತಿಬಂಧು – ಸ್ವಸಹಾಯ ಸಂಘಗಳ ಒಕ್ಕೂಟ, ಕಿನ್ನಿಗೋಳಿ ವಲಯ ಹಾಗೂ ಕಿನ್ನಿಗೋಳಿ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಕೃಷಿಕ ಬಂಧುಗಳಿಗೆ, ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಕೀಟರೋಗ ನಿಯಂತ್ರಣ ಮಾಹಿತಿ ಕಾರ್ಯಕ್ರಮ ಬುಧವಾರ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಜಿ.ಪಂ. ಸದಸ್ಯೆ ಆಶಾ ಆರ್. ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಿನ್ನಿಗೋಳಿ ಪಂಚಾಯತ್ ಅಧ್ಯಕ್ಷ ದೇವಪ್ರಸಾದ್ ಪುನರೂರು ಅಧ್ಯಕ್ಷತೆ ವಹಿಸಿದ್ದು, ತಾ.ಪಂ. ಸದಸ್ಯ ರಾಜು ಕುಂದರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ನಾಗೇಶ್, ಯುಗಪುರುಷದ ಭುವನಾಭಿರಾಮ ಉಡುಪ, ರೈತ ಹಿತ ರಕ್ಷಕ ಶ್ರೀಧರ್ ಶೆಟ್ಟಿ ಉಪಸ್ಥಿತರಿದ್ದು, ತೋಟಗಾರಿಕಾ ಇಲಾಖೆಯ ಅಧಿಕಾರಿಗಳಾದ ಹನುಮಂತಪ್ಪ, ಡಾ| ಪ್ರಭಾಕರ ಎ. ಮಾಹಿತಿ ನೀಡಿದರು.
ಶಶಿ ರಾವ್ ಪ್ರಾರ್ಥಿಸಿ,ಮುಲ್ಕಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ನಾರಾಯಣಾಚಾರ್ ಸ್ವಾಗತಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಕೆ. ಲತಾ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ರೋಟರಿ ಶಾಲೆಯ ಅಭಿಷೇಕ್‌ಗೆ ರಾಷ್ಟ್ರ ಮಟ್ಟದ ಕರಾಟೆಯಲ್ಲಿ ಚಿನ್ನ

ಕಿನ್ನಿಗೋಳಿ ರೋಟರಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಮಂಗಳೂರಿನ ವೆಸ್ಟರ್ನ್ ಕರಾಟೆ ಸಂಸ್ಥೆಯ ವತಿಯಿಂದ ನಡೆದ...

Close