ರಾಜ್ಯ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಮಹೇಶ್ ಟೆಂಗಿನಕಾಯಿ ಮುಲ್ಕಿಗೆ ಭೇಟಿ

Photo by Narendra Kerekadu

ಮುಲ್ಕಿ ಮೇ 13 : ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಪೂರಕವಾಗಿ ವಿವಿಧ ಶೈಕ್ಷಣಿಕ ಪದ್ಧತಿಯಲ್ಲಿ ನಾಯಕತ್ವ ಶಿಬಿರವನ್ನು ನಡೆಸಲಾಗುತ್ತಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಿ ಒಟ್ಟು 15 ಲಕ್ಷ ವಿದ್ಯಾರ್ಥಿಗಳಿಗೆ ಶಿಬಿರವನ್ನು ನಡೆಸಲಾಗುತ್ತಿದ್ದು ಈವರೆಗೆ 8ಲಕ್ಷ ವಿದ್ಯಾರ್ಥಿಗಳನ್ನು ತಲುಪಲಾಗಿದೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಮಹೇಶ್ ಟೆಂಗಿನಕಾಯಿ ಹೇಳಿದರು.
ಅವರು ಮುಲ್ಕಿ ನಾರಾಯಣಗುರು ಫ್ರೌಢಶಾಲೆಯಲ್ಲಿ ವಿವಿಧ ಸಂಘಟನೆಯ ಸಂಯೋಜನೆಯಲ್ಲಿ ನಡೆಯುತ್ತಿರುವ ವಿದ್ಯಾ ವಿಹಾರ ಮಕ್ಕಳ ಬೇಸಿಗೆ ಶಿಬಿರದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.
ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಇಟ್ಟುಕೊಂಡರು ರಾಜ್ಯಾದ್ಯಾಂತ ವಿವಿಧ ಗ್ರಾಮೀಣ ಭಾಗದಲ್ಲಿಯೇ ಇಂತಹ ತರಬೇತಿ ಶಿಬಿರಗಳನ್ನು ನಡೆಸಲಾಗಿದ್ದು ಪರಿಣಾಮಕಾರಿಯಾಗಿ ನಡೆಯುತ್ತಿದೆ, ಸ್ಥಳೀಯರ ಸಹಕಾರದಿಂದ ನಡೆಯುತ್ತಿರುವುದು ಶ್ಲಾಘನೀಯ ಎಂದರು.
ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಾಘು ಕೆ.ಸುವರ್ಣ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಲ್ಕಿ ಬಿಲ್ಲವ ಸಂಘದ ಪರವಾಗಿ ಅಧ್ಯಕ್ಷ ಮಹೇಶ್ ಟೆಂಗಿನಕಾಯಿಯವರನ್ನು ಸನ್ಮಾನಿಸಲಾಯಿತು. ಶಿಬಿರಾರ್ಥಿಗಳಾದ ಲಿಖಿತ್ ಮತ್ತು ಮಯೂರಿ ಶಿಬಿರದ ಅನುಭವವನ್ನು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶಕುಂತಲಾ, ಪಿ.ಡಿ.ಒ ಶಾಂತಲಾ, ಶಿಬಿರದ ಸಂಯೋಜಕ ನರೇಂದ್ರ ಕುಮಾರ್ ಕೋಟ, ಸಂಘದ ಪ್ರಧಾನ ಕಾರ್ಯದರ್ಶಿ ಗೋಪಿನಾಥ ಪಡಂಗ, ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷ ರಮೇಶ್ ಬಂಗೇರ, ಉಪಸ್ಥಿತರಿದ್ದರು.
ಬೆಂಗಳೂರಿನ ಟ್ಯಾಲೆಂಟ್ ಸರ್ಚ್ ಫೌಂಡೇಶನ್, ಧಾರವಾಡದ ಬಾಲ ವಿಕಾಸ ಅಕಾಡೆಮಿ, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘ, ಮುಲ್ಕಿ ಯುವವಾಹಿನಿ ಘಟಕದ ಜಂಟಿ ಸಂಯೋಜನೆಯಲ್ಲಿ ಈ ಶಿಬಿರ ಮೇ 13ರವರೆಗೆ ನಡೆಯಲಿದೆ ಒಟ್ಟು 24 ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಉದಯ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಯುವವಾಹಿನಿ ಕಾರ್ಯದರ್ಶಿ ಚೇತನ್ ವಂದಿಸಿದರು.

Comments

comments

Leave a Reply

Read previous post:
ಆಸ್ಕರ್ ಫೆರ್ನಾಂಡಿಸ್‌ರ ಮುಲ್ಕಿ ಹೆದ್ದಾರಿ ವಿಸ್ತರಣೆ ಪರಿಶೀಲನೆ

Photos by PrakashM Suvarna & Narendra Kerekadu ಮುಲ್ಕಿ ಮೇ 12: ಸುರತ್ಕಲ್ ಮತ್ತು ಕುಂದಾಪುರದ ನಡುವೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯ ಕಾಮಗಾರಿಯಲ್ಲಿ ಮುಲ್ಕಿಯಲ್ಲಿ ಉಂಟಾಗಿರುವ...

Close