ವಿದ್ಯೆಗೆ ಪ್ರೋತ್ಸಾಹ ನೀಡಿದರೆ ಜೀವನ ಸಾರ್ಥಕ

Photo by Prakash M Suvarna

ಮುಲ್ಕಿ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಮುಖ್ಯ ಕರ್ತವ್ಯ ಎಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ರವರು ಮೂಲ್ಕಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿಯವರು ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಹೇಳಿದರು.

ಮುಲ್ಕಿ ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿಯವರು ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಹತ್ತು ವಿದ್ಯಾರ್ಥಿಗಳಿಗೆ ಪುರಸ್ಕಾರ ಕೊಡುವ ಕಾರ್ಯಕ್ರಮವನ್ನು ಪುನರೂರು ಟೂರಿಸ್ಟ್ ಹೋಮ್‌ನ ಸಭಾ ಭವನದಲ್ಲಿ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಶ್ರೀ ಹರಿಶ್ಚಂದ್ರ ವಿ. ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಿತಿಯ ಅಧ್ಯಕ್ಷರಾದ ಶ್ರೀ ಹರಿಶ್ಚಂದ್ರ ಪಿ. ಸಾಲಿಯಾನ್ ರವರು ಸ್ವಾಗತಿಸಿದರು. ಕೋಶಾಧಿಕಾರಿ ಶ್ರೀ ದಾಮೋದರ್ ರವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಶ್ರೀ ಶಿವಶಂಕರ್ ರವರು ವಂದನಾರ್ಪಣೆ ಮಾಡಿದರು. ಜೊತೆ ಕಾರ್ಯದರ್ಶಿ ಶ್ರೀ ಗೋಪಿನಾಥ ಪಡಂಗ ರವರು ಕಾರ್ಯಕ್ರಮ ನಿರೂಪಿಸಿದರು.

 

Comments

comments

Leave a Reply

Read previous post:
Obituary: Sister Rupert (65 )

Sister Rupert (65 ), Warden of Kinnigoli Maryvele Convent passed away on 2nd July 2012. She had worked as a...

Close