ಕಿಲ್ಪಾಡಿ ಗ್ರಾಮ ಪಂಚಾಯತ್‌ನಿಂದ ಜೈವಿಕ ಇಂದನ ಜಾಗೃತಿ

ಮುಲ್ಕಿ : ಭವಿಷ್ಯದಲ್ಲಿ ಮಾನವ ಸಂಪನ್ಮೂಲಕ್ಕೆ ಅತಿ ಅಗತ್ಯವಾದ ಇಂದನದ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಅದಕ್ಕೆ ಪರ್ಯಾಯವಾಗಿ ಜೈವಿಕ ಇಂಧನವನ್ನು ಬಳಸುವ ಬಗ್ಗೆ ಮಾಹಿತಿ ಪಡೆದು ಮತ್ತಷ್ಟು ಪ್ರೋತ್ಸಾಹಿಸಬೇಕಾಗಿದೆ ಎಂದು ಕಿಲ್ಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್ ಹೇಳಿದರು. ಕೆಂಚನಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜೈವಿಕ ಇಂಧನ ಜನಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಶೋಭಾ ಎಚ್. ಮಾತನಾಡಿ ಭವಿಷ್ಯದ ಚಿಂತನೆ ಮಾಡುವ ಶಿಕ್ಷಣ ಸಂಸ್ಥೆಗಳಿಂದಲೇ ಇಂತಹ ಜಾಗೃತಿ ಕಾರ್ಯಕ್ರಮ ನಡೆದಲ್ಲಿ ಕಾರ್ಯಕ್ರಮ ಪರಿಣಾಮಕಾರಿಯಾಗಿ ಜನರಿಗೆ ತಲುಪುತ್ತದೆ ಎಂದು ಹೇಳಿದರು.
ಕಿಲ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಮಲ ಬಿ. ಸುವರ್ಣ, ಶಾಲಾ ಮುಖ್ಯ ಶಿಕ್ಷಕಿ ಲಿಝಿ ಅನಿತಾ ಪಿಂಟೋ, ವಿದ್ಯಾರ್ಥಿಗಳು, ಶಾಲಾಭಿವೃದ್ದಿ ಸದಸ್ಯರು, ಶಿಕ್ಷಕಿಯರು, ಗ್ರಾಮಸ್ಥರು ಭಾಗವಹಿಸಿದ್ದರು.

Comments

comments

Leave a Reply

Read previous post:
ಯಕ್ಷಲಹರಿ ಸರಣಿ ತಾಳಮದ್ದಲೆ “ಭಕ್ತಿರೇವಗರೀಯಸೀ” ಉದ್ಘಾಟನೆ.

Photo by Sharath Kinnigoli ಕಿನ್ನಿಗೋಳಿ : ಕಿನ್ನಿಗೋಳಿಯ ಯಕ್ಷಲಹರಿ ಸಂಸ್ಥೆಯ ಇಪ್ಪತ್ತೆರಡನೆಯ ವಾರ್ಷಿಕೋತ್ಸವದ ಅಂಗವಾಗಿ ಯುಗಪುರುಷ ಸಂಸ್ಥೆಯ ಸಹಯೋಗದೊಂದಿಗೆ ಎಂಟುದಿನಗಳ ಅಪೂರ್ವ- ಶಿಸ್ತು ಬದ್ಧ ಕಾಲಮಿತಿ...

Close