ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಕಟೀಲು:  “ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದು ಇಂದಿನ ವಿದ್ಯಾರ್ಥಿಗಳ ಆದ್ಯ ಕರ್ತವ್ಯ” ಎಂದು ಕಟೀಲು ಶ್ರೀ ದು.ಪ.ದೇ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ  ಜಯರಾಮ ಪೂಂಜ ಸ್ವಾತಂತ್ರ್ಯೋತ್ಸವದ ಧ್ವಜರೋಹಣದಲ್ಲಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಸೇವಾದಳದವರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಹ ಸಂಸ್ಥೆಯ ಉಪ ಪ್ರಾಚಾರ್ಯರಾದ  ಸುರೇಶ ಭಟ್ ಗೌರವ ರಕ್ಷೆಯನ್ನು ಸ್ವೀಕರಿಸಿ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ರಾಜಶಾಸ್ತ್ರ ಉಪನ್ಯಾಸಕಿಯಾದ  ಭಾರತಿ ಎನ್. ಶೆಟ್ಟಿ ಪ್ರಧಾನ ಭಾಷಣ ಮಾಡಿದರು. ಸಂಸ್ಕೃತ ಉಪನ್ಯಾಸಕರಾದ  ಶಂಕರ ಮರಾಠೆಯವರು ಧನ್ಯವಾದವನ್ನು ನೀಡಿದರು. ಆಂಗ್ಲ ಭಾಷಾ ಉಪನ್ಯಾಸಕರಾದ  ಗೋಪಿನಾಥ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

Comments

comments

Leave a Reply

Read previous post:
ಮೆನ್ನಬೆಟ್ಟುವಿನಲ್ಲಿ ಆಟಿಡೊಂಜಿ ದಿನ

ಕಿನ್ನಿಗೋಳಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೆನ್ನಬೆಟ್ಟು ಕಾರ್ಯಕ್ಷೇತ್ರದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮಹಿಳಾ ಜ್ಞಾನವಿಕಾಸ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಭಾನುವಾರ,...

Close