ಪದವಿ ಪೂರ್ವ ಕಾಲೇಜು ವಾಲಿಬಾಲ್ ಕ್ರೀಡಾಕೂಟ

Bhagyavan Sanil
ಮುಲ್ಕಿ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಇವರ ಆಶ್ರಯದಲ್ಲಿ ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ಪುರುಷರ ಮತ್ತು ಮಹಿಳೆಯರ ವಾಲಿಬಾಲ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಹರಿಶ್ಚಂದ್ರ.ಪಿ.ಸಾಲ್ಯಾನ್ “ವಿದ್ಯಾರ್ಥಿಗಳ ಭಾಗವಹಿಸುವಿಕೆ ಕೇವಲ ಪ್ರಶಸ್ತಿಗಾಗಿರದೆ ಅದು ಅತ್ಯುತ್ತಮ ಕ್ರೀಡಾ ಸಾಧನೆಯಾಗಿ ರೂಪಪುಗೊಳ್ಳುವುದು ಬಹಳ ಅಗತ್ಯ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಶಶಿಕಾಂತ ಶೆಟ್ಟಿ ವಹಿಸಿದ್ದರು, ಉದ್ಯಮಿ ಶಶಿ ಅಮೀನ್ ಕಾರ್ಯಕ್ರಮ ಉದ್ಘಾಟಿಸಿದರು, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಯದೀಶ್ ಅಮೀನ್ ಕೊಕ್ಕರ್‌ಕಲ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಕಾರ್ಯದರ್ಶಿ ಅರುಣ್ ಡಿಸೋಜಾ, ಮೂಲ್ಕಿ ನಗರ ಪಂಚಾಯತ್ ಉಪಾಧ್ಯಕ್ಷ ಯೋಗೀಶ್ ಕೋಟ್ಯಾನ್, ಸದಸ್ಯ ಪುತ್ತುಬಾವಾ, ವಾಸು ಪೂಜಾರಿ, ಕಾಲೇಜಿನ ಸಂಚಾಲಕ ಎಚ್.ವಿ.ಕೋಟ್ಯಾನ್, ಅಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಮುಖ್ಯೋಪಾದ್ಯಾಯಿನಿ ಶಶಿಲೇಖಾ, ಕ್ರೀಡಾ ನಿರ್ದೇಶಕ ನವೀನ್ ಪೂಜಾರಿ ಉಪಸ್ಥಿತರಿದ್ದರು. ಬಾಲಚಂದ್ರ ಸನಿಲ್ ಸ್ವಾಗತಿಸಿದರು. ಹರ್ಷಿತಾ ನಿರೂಪಿಸಿದರು. ಅಡ್ವೆ ರವೀಂದ್ರ ಪೂಜಾರಿ ವಂದಿಸಿದರು.

Comments

comments

Leave a Reply

Read previous post:
ಕಿನ್ನಿಗೋಳಿ ಅಂತರ್ ಶಾಲಾ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆ

ಕಿನ್ನಿಗೋಳಿ:  ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಶಾಲಾ ವಠಾರದಲ್ಲಿ ಅಂತರ್ ಶಾಲಾ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆ ನಡೆಯಿತು. ಕಿನ್ನಿಗೋಳಿ ರೋಟರಿ...

Close