ಕಿನ್ನಿಗೋಳಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ

ಕಿನ್ನಿಗೋಳಿ: ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ ಉತ್ತಮ ಸಮಾಜಮುಖಿ ಸೇವಾ ಯೋಜನೆಗಳನ್ನು ನೀಡಿದೆ. ಇದನ್ನು ಅರ್ಥೈಸಿ ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಹೇಳಿದರು. ಬುಧವಾರ ಸಂಜೆ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ಎಲ್ಲಾ ಜಾತಿ ಮತ ಮತ್ತು ವರ್ಗಗಳ ಹಿತ ದೃಷ್ಠಿಯಲ್ಲಿ ಅತ್ಯುತ್ತಮ ಯೋಜನೆಗಳನ್ನು ನೀಡಿದ್ದು ಮಾತ್ರವಲ್ಲದೆ ಭಾಷೆ ಸಂಸ್ಕೃತಿಯ ಉನ್ನತಿಯ ಕ್ಷೇತ್ರದಲ್ಲೂ ಹೆಚ್ಚಿನ ಸಹಕಾರ ನೀಡಿ ಉತ್ತಮ ಅಭಿವೃದ್ಧಿಯನ್ನು ಸಾಧಿಸಿ ತೋರಿಸಿದ್ದು ಕಾರ್ಯಕರ್ತರು ಗ್ರಾಮೀಣ ಪ್ರದೇಶದ ಜನರಿಗೆ ಯೋಜನೆಗಳ ಬಗ್ಗೆ ತಿಳಿ ಹೇಳಬೇಕು ಶ್ರೀ ಸಾಮಾನ್ಯ ಅದರ ಪ್ರಯೋಜನ ಪಡೆಯಲು ಸಹಕಾರ ನೀಡಬೇಕು. ಜನರನ್ನು ಬಿಜೆಪಿ ಸದಸ್ಯರಾಗುವಂತೆ ಪ್ರೇರೇಪಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವ ಮಠಂದೂರು ದಿಕ್ಸೂಚಿ ಬಾಷಣಗಾರರಾಗಿದ್ದರು.
ಕಸೂರಿ ಪಂಜ, ಜಗದೀಶ್ ಅಧಿಕಾರಿ, ಭುವನಾಭಿರಾಮ ಉಡುಪ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಟೀಲಿನಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಕಟೀಲು : ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್, ಶ್ರೀ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣರ ಅಭಿನಂದನ ಸಮಿತಿ ಹಾಗೂ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಶ್ರೀ...

Close