ರಾಷ್ಟ್ರಮಟ್ಟ ಕರಾಟೆ-ಪ್ರತೀಕ್ಷಾ ಹೆಜಮಾಡಿ ಆಯ್ಕೆ

Narendra Kerekad

ಮೂಲ್ಕಿ: ಮಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯೋಜನೆಯಲ್ಲಿ ಕಿನ್ನಿಗೋಳಿಯಲ್ಲಿ ಇತ್ತೀಚೆಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಪ್ರತೀಕ್ಷಾ ಎನ್.ಅಮಿನ್ ಹೆಜಮಾಡಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಕೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆಯನ್ನು ಪಡೆದಿದ್ದಾರೆ.
ಮುಂದಿನ ಡಿಸೆಂಬರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿರುವ ಪ್ರತೀಕ್ಷಾ ಎನ್.ಅಮೀನ್ ಈಕೆ ಹೆಜಮಾಡಿಯ ನಿವಾಸಿಯಾಗಿರುವ ನಿತ್ಯಾನಂದ ಮತ್ತು ಶಾಲಾ ಶಿಕ್ಷಕಿ ರಾಜೇಶ್ವರೀ ದಂಪತಿಯ ಸುಪುತ್ರಿ.

 

Comments

comments

Leave a Reply

Read previous post:
ಕಟೀಲು ಶಿಕ್ಷಕ-ರಕ್ಷಕ ಪದಾಧಿಕಾರಿಗಳ ಆಯ್ಕೆ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಮಹಾಸಭೆಯಲ್ಲಿ 2012-13 ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಶಿಕ್ಷಕ-ರಕ್ಷಕ ಸಂಘದ ಗೌರವಾಧ್ಯಕ್ಷ ವೈ ಮೋನಪ್ಪ ಶೆಟ್ಟಿ,...

Close