ಮೇರಿವೆಲ್ ಶಾಲಾ ವಿದ್ಯಾರ್ಥಿಗಳು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ: ಶಿಕ್ಷಣ ಇಲಾಖೆಯ ವತಿಯಿಂದ ನಡೆದ ವಿವಿಧ ಅಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕಿನ್ನಿಗೋಳಿ ಮೇರಿವೆಲ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಗಳನ್ನು ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಬ್ಯಾಡ್ ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ಸಮಂತಾ ಡಿಸೋಜ, ವೈಭವಿ ಶೆಟ್ಟಿ ಹಾಗೂ ಲಖಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕು ಮಟ್ಟದ ಹ್ಯಾಂಡ್‌ಬಾಲ್‌ನಲ್ಲಿ ಜೆನಿಶಾ ಡಿ’ಸೋಜ ನೇತೃತ್ವದ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಸಮಂತಾ ಡಿಸೋಜ ನೇತೃತ್ವದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರಾಟೆ ಸ್ಪರ್ಧೆಯಲ್ಲಿ ರಾಹುಲ್ ಸುವರ್ಣ ಪ್ರಥಮ, ವಿನ್‌ಸ್ಟನ್ ಸಿಕ್ವೇರಾ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಫರ್ವಿನ್ ಡಿಸೋಜಾ ತಂಡ, ಹ್ಯಾಂಡ್‌ಬಾಲ್‌ನಲ್ಲಿ ರಾಕೇಶ್ ತಂಡ, ಬಾಲಕಿಯರ ಟೇಬಲ್ ಟೆನ್ನಿಸ್‌ನಲ್ಲಿ ವೈಭವಿ ತಂಡ ಹಾಗೂ ಬಾಲಕರ ಶಟಲ್ ಬ್ಯಾಡ್‌ಮಿಂಟನ್ ತಂಡಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಜೆಸಿಂತಾ ರೊಡ್ರಿಗಸ್ ಬಿ.ಎಸ್, ಹಾಗೂ ದೈಹಿಕ ಶಿಕ್ಷಕ ಸಂತೋಷ್ ಕುಮಾರ್.

Comments

comments

Leave a Reply

Read previous post:
ಉಟೋಪಿಯ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಕಿನ್ನಿಗೋಳಿ : ಕಿನ್ನಿಗೋಳಿ  ರಾಮ ಮಂದಿರದ ಬಳಿ ವೇದವ್ಯಾಸ ಉಡುಪ ಮತ್ತು ಅಬ್ದುಲ್ ಖಾದರ್ ಮಾಲಕತ್ವದ ಉಟೋಪಿಯ ವಾಣಿಜ್ಯ ಸಂಕೀರ್ಣವನ್ನು ಸಂಸದ ನಳಿನ್ ಕುಮಾರ್ ಕಟೀಲು  ಉದ್ಘಾಟಿಸಿದರು....

Close