ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ ಗಾಂಧಿ ಜಯಂತಿ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ 2012-13 ರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕ್ರಿಯಾ ಯೋಜನೆ ಪಟ್ಟಿ ತಯಾರಿಸಲಾಯಿತು.
ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಸದಸ್ಯರು ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭ ತೋಟಗಾರಿಕೆ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ನೀಡಲ್ಪಟ್ಟ ತೆಂಗಿನ ಸಸಿಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಉಪಾಧ್ಯಕ್ಷೆ ಹೇಮಾಲತ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ, ಪಿ.ಡಿ.ಒ. ಕೃಷ್ಣ ಸ್ವಾಮಿ, ಕಾರ್ಯದರ್ಶಿ ಅಶೋಕ್, ಲೆಕ್ಕಾಧಿಕಾರಿ ನಿರ್ಮಲ ಸಲ್ಡಾನಾ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಮೇರಿವೆಲ್ಲ್ಪವಿದ್ಯಾರ್ಥಿನಿ ನಿಲಯಕ್ಕೆ ಹಣ್ಣು ಹಂಪಲು ವಿತರಣೆ

ಕಿನ್ನಿಗೋಳಿ: ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯ ಪ್ರಯುಕ್ತ ಕಿನ್ನಿಗೋಳಿ ರೋಟರಿ, ರೋಟರಾಕ್ಟ್ ಹಾಗೂ ಇನ್ನರವೀಲ್ ಕ್ಲಬ್‌ಗಳು ಕಿನ್ನಿಗೋಳಿಯ ಮೇರಿವೆಲ್ ಅಲ್ಪಸಂಖ್ಯಾತರ ವಿದ್ಯಾರ್ಥಿನಿ ನಿಲಯಕ್ಕೆ ಹಣ್ಣು...

Close