ಗ್ರಾಮದ ಅಭ್ಯದಯಕ್ಕೆ ಪ್ರಾಮಾಣಿಕ ಪ್ರಯತ್ನ ಅಗತ್ಯ: ಕೃಷ್ಣ ಶೆಟ್ಟಿಗಾರ್

Narendra Kerekadu
ಕಿಲ್ಪಾಡಿ : ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪ್ರಮಾಣಿಕವಾಗಿ ಪ್ರಯತ್ನ ನಡೆಸಬೇಕು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ವಿಶೇಷ ಆದ್ಯತೆ ನೀಡಿ ಅವರನ್ನು ಮುಖ್ಯವಾಹಿನಿಗೆ ಕರೆತರಬೇಕು ಎಂದು ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್ ಹೇಳಿದರು.
ಮುಲ್ಕಿ ಬಳಿಯ ಕಿಲ್ಪಾಡಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ತೆಂಗಿನ ಗಿಡಗಳನ್ನು ವಿತರಿಸಿ ಮಾತನಾಡಿದರು.
ತೋಟಗಾರಿಕಾ ಅಭಿವೃದ್ದಿ ಅಧಿಕಾರಿ ನಾರಾಯಣಾಚಾರಿ ತೋಟಗಾರಿಕೆ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗಖಾತರಿ ಯೋಜನೆಯ ಬಗ್ಗೆ ವಿಶೇಷ ಮಾಹಿತಿ ನೀಡಿದರು.
ಉಪಾಧ್ಯಕ್ಷೆ ವಿಮಲಾ ಸುವರ್ಣ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶೋಭಾ ಎಚ್., ಮತ್ತು ಪಂಚಾಯಿತಿ ಸದಸ್ಯರು ಹಾಜರಿದ್ದರು. ಸುರೇಶ್ ನಿರೂಪಿಸಿ, ರಮೇಶ್ ಬಂಗೇರ ವಂದಿಸಿದರು.

Comments

comments

Leave a Reply

Read previous post:
ಉಚಿತ ನೇತ್ರ ಚಿಕಿತ್ಸಾ ಶಿಬಿರ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಿ ಕ್ಲಬ್, ರೋಟರಾಕ್ಟ್, ಇನ್ನರ್‌ವೀಲ್ ಕ್ಲಬ್ ಹಾಗೂ ಯುಗಪುರುಷದ ಆಶ್ರಯದಲ್ಲಿ ದಿನಾಂಕ 09-10-2012 ನೇ ಮಂಗಳವಾರ ಉಚಿತ ನೇತ್ರ ಚಿಕಿತ್ಸಾ ಶಿಬಿರ ಕಿನ್ನಿಗೋಳಿಯ ಯುಗಪುರುಷ...

Close