ಮೂಲ್ಕಿ ಹೋಬಳಿ : ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗೂ ಹೆತ್ತವರು ಹಾಗೂ ಶಿಕ್ಷಕರು ಪ್ರೋತ್ಸಾಹ ಸಹಕಾರ ನೀಡಿ ಸುಪ್ತ ಪ್ರತಿಭೆಗಳನ್ನು ಹೊರ ಹೊಮ್ಮುವಂತೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್ ಹೇಳಿದರು
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ಆಶ್ರಯದಲ್ಲಿ ಕಟೀಲು ಸರಸ್ವತೀ ಸದನದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂಲ್ಕಿ ಹೋಬಳಿ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಶುಭಾಶಂಸನೆಗೈದರು. ಮರವೂರು ಬೀಡು ಬಾಬು ಶೆಟ್ಟಿ, ಉಪಪ್ರಾಚಾರ್ಯ ಸುರೇಶ್ ಭಟ್, ಕೆ.ವಿ.ಶೆಟ್ಟಿ, ಸಾಯಿನಾಥ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಿನ್ನಿಗೋಳಿ ಪ್ರತಿಭಾ ಕಾರಂಜಿ

ಕಿನ್ನಿಗೋಳಿ : ಸರಕಾರದಿಂದ ನಡೆಸಲ್ಪಡುವ ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ವ್ಯಕ್ತಿತ್ವ ವಿಕಸನ ಜಾಗೃತಗೊಳ್ಳುತ್ತದೆ. ಪಾಲಕರು ಮತ್ತು ಶಿಕ್ಷಕರು ಮಕ್ಕಳನ್ನು ಸೃಜನಶೀಲರಾಗಿ ರೂಪಿಸಬೇಕು ಎಂದು...

Close