ತೋಕೂರು ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಕಿನ್ನಿಗೋಳಿ: ವಿದ್ಯಾರ್ಥಿಗಳು ಎನ್.ಎಸ್.ಎಸ್.ನಲ್ಲಿ ಕಲಿತ ಆದರ್ಶಗಳನ್ನು ಜೀವನದುದ್ದಕ್ಕೂ ಪಾಲಿಸಿ ಸಮಾಜಕ್ಕೆ ಯೋಗ್ಯ ವ್ಯಕ್ತಿಗಳಾಗಿ ಬಾಳಿ ಎಂದು ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಪ್ರಸಾದ ಪುನರೂರು ಹೇಳಿದರು.
ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಭಾನುವಾರ ನಡೆದ ಎಂ.ಆರ್. ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ, ತೋಕೂರು ,ತಪೋವನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಂಸ್ಠೆಯ ಪ್ರಿನ್ಸಿಪಾಲ್ ವೈ.ಎನ್. ಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಮೋಹನ್ ಪಿ. ಸುವರ್ಣ, ಕ್ಷೇತ್ರದ ಪ್ರಧಾನ ಅರ್ಚಕ ಎನ್. ಪುರುಷೋತ್ತಮ್ ಭಟ್ ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ರಘುರಾಮ್ ರಾವ್ ಸ್ವಾಗತಿಸಿ ಸಹ ಶಿಬಿರಾಧಿಕಾರಿ ಹರಿ. ಎಚ್. ವಂದಿಸಿದರು. ದಯಾನಂದ ಲಾಗ್ವಣ್‌ಕರ್ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ಕಿನ್ನಿಗೋಳಿ ಲಿಟ್ಲ್ ಪ್ಲವರ್ ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ : ಶ್ರದ್ಧೆ, ಪ್ರಾಮಾಣಿಕ ಪ್ರಯತ್ನ, ಸಾಧನೆ ಬಾಳಿನ ಯಶಸ್ಸಿಗೆ ದಾರಿ ದೀಪ ಎಂದು ಕಿನ್ನಿಗೋಳಿ ಬೆಥನಿ ಶಿಕ್ಷಣ ಸಮೂಹ ಸಂಸ್ಥೆ ಸಂಚಾಲಕಿ ವಂ. ಭಗಿನಿ ಅಕ್ವಿಲ್ಲಾ ಬಿ....

Close