ಕ್ರೀಡೆಗಳಿಂದ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ

ಕಿನ್ನಿಗೋಳಿ : ವಿದ್ಯಾರ್ಥಿಗಳ ಜೀವನದಲ್ಲಿ ಸಚ್ಚಾರಿತ್ರ್ಯ ನಿರ್ಮಾಣಕ್ಕೆ ಮಾನಸಿಕ ಮತ್ತು ಶಾರೀರಿಕ ಆರೋಗ್ಯ ವೃದ್ಧಿಗೆ ಕ್ರೀಡೆಗಳು ಅತ್ಯಂತ ಸಹಕಾರಿಯಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ಧನಾತ್ಮಕ ಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಕಟೀಲು ದೇವಳ ಆಡಳಿತ ಅಧಿಕಾರಿ ಮತ್ತು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತ ಡಾ|. ಹರೀಶ್ ಕುಮಾರ್ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದರು.
ಅರ್ಚಕ ವೇದಮೂರ್ತಿ ವೆಂಕಟರಮಣ ಆಸ್ರಣ್ಣರು ಆರ್ಶೀವಚನಗೈದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಈಶ್ವರ ಕಟೀಲು, ಮಾಜಿ ಅಧ್ಯಕ್ಷ ಮೋನಪ್ಪ ಶೆಟ್ಟಿ ಉಪಸ್ಥಿತರಿದ್ದರು.
ಪ್ರಿನ್ಸಿಪಾಲ್ ಜಯರಾಂ ಪೂಂಜ ಪ್ರಸ್ತಾವನೆಗೈದು ಸ್ವಾಗತಿಸಿದರು. ಶಾರೀರಿಕ ನಿರ್ದೇಶಕ ವಿಜಯಕುಮಾರ್ ಶೆಟ್ಟಿ ವಂದಿಸಿದರು. ಉಪನ್ಯಾಸಕ ಗೋಪಿನಾಥ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

 ಕಟೀಲು ದೇವಳ ಆಡಳಿತ ಅಧಿಕಾರಿ ಡಾ|. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Comments

comments

Leave a Reply

Read previous post:
ಕಿನ್ನಿಗೋಳಿ ಸೈಂಟ್ ಮೇರಿಸ್ ಹಿ. ಪ್ರಾ. ಶಾಲೆ ಶಿಕ್ಷಕ ಬ್ಯಾಪ್ಟಿಸ್ಟ್ ಡಿ’ಸೋಜ ಬೀಳ್ಕೊಡುಗೆ

Lianel Pinto ಕಿನ್ನಿಗೋಳಿ 37 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಬ್ಯಾಪ್ಟಿಸ್ಟ್ ಡಿ’ಸೋಜ ಅವರಿಗೆ ಬೀಳ್ಕೊಡುಗೆ ಕಿನ್ನಿಗೋಳಿ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು....

Close