548ನೇ ಮದ್ಯವರ್ಜನ ಶಿಬಿರ ಸಮಾರೋಪ

ಕಿನ್ನಿಗೋಳಿ: ಮನಸ್ಸನ್ನು ನಿಗಾವಹಿಸಿ ಶಿಸ್ತು, ಸಂಯಮ, ಉತ್ತಮ ಸಂಸ್ಕಾರ ಬೆಳೆಸಿಕೊಂಡರೆ ಬದುಕು ಉತ್ತಮವಾಗುವುದು. ಮದ್ಯಪಾನ ಮುಕ್ತರಾಗಿ ಬದುಕನ್ನು ಪರಿವರ್ತನೆ ಮಾಡಿಕೊಂಡು ಸಮಾಜದ ಏಳಿಗೆಗೆ ಸಹಕರಿಸಿ ಎಂದು ಶ್ರೀ ಕ್ಷೇತ್ರ ಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು.

ಮಂಗಳವಾರ (ಡಿಸೆಂಬರ್ 11) ಕರ್ನಿರೆ ಶ್ರೀ ವಿಷ್ಣುಮೂರ್ತಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ತಾಲೂಕು, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಕಿನ್ನಿಗೋಳಿ ವಲಯ, ಪ್ರಗತಿಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ ಕಿನ್ನಿಗೋಳಿ ವಲಯ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕರ್ನಿರೆ, ಲಯನ್ಸ್ ಕ್ಲಬ್ ಕಿನ್ನಿಗೋಳಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ 548ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಗುರಿ ಮತ್ತು ಗುರುವಿದ್ದರೆ ಉತ್ತಮ ಸಾಧನೆ ಮಾಡಬಹುದು ಎಂದು ಶಿಬಿರಾರ್ಥಿ ಚಂದ್ರಶೇಖರ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರ್ನಿರೆ ಹರಿಶ್ಚಂದ್ರ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾಜಿ ಸಚಿವ ಅಮರನಾಥ ಶೆಟ್ಟಿ, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಅಧ್ಯಕ್ಷ ದೇವದಾಸ ಹೆಬ್ಬಾರ್, ಶ್ರೀ ಕ್ಷೇ.ಧ.ಗ್ರಾ. ಯೋ. ಮಂಗಳೂರು ತಾಲೂಕು ಯೋಜನಾಧಿಕಾರಿ ರಾಘವ ಎಂ., ಮುಂಬಯಿ ಮಿರಾದಹನು ಬಂಟರ ಸಂಘ ಗೌರವಾಧ್ಯಕ್ಷ ವಿರಾರ್ ಶಂಕರ ಶೆಟ್ಟಿ, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಭಂಜನ್, ಮಂಗಳೂರು ಗ್ರಾಮಾಂತರ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಭುವನಾಭಿರಾಮ ಉಡುಪ, ಜನಜಾಗೃತಿ ಕಿನ್ನಿಗೋಳಿ ವಲಯಾಧ್ಯಕ್ಷ ಯೋಗೀಶ್ ರಾವ್ ಏಳಿಂಜೆ, ಬಳ್ಕುಂಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ಅಮೀನ್, ರೋಹಿತ್, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಹಾಜಿ ಕೆ. ಎಸ್. ಸೈಯದ್ ಕರ್ನಿರೆ, ಶಿಬಿರಾಧಿಕಾರಿ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಪ್ರಸ್ತಾವನೆಗೈದರು. ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷ ದಿನಕರ ಶೆಟ್ಟಿ ಚೆನ್ನಯಬೆನ್ನಿ ವಂದಿಸಿದರು. ಮೇಲ್ವಿಚಾರಕಿ ಲತಾ ಕೆ. ಅಮೀನ್ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply