ಕಟೀಲು ಪ.ಪೂ. ಕಾಲೇಜು ಪ್ರತಿಭಾ ಪುರಸ್ಕಾರ

ಕಿನ್ನಿಗೋಳಿ: ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಕಲಿಕೆಗೆ ಶಿಸ್ತು ಬದ್ಧ ವಾತಾವರಣವಿದ್ದರೆ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗುತ್ತಾರೆ ಎಂದು ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು.
ಬುಧವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಕಟೀಲು ದೇವಳ ಅನುವಂಶಿಕ ಆಡಳಿತ ಮೊಕ್ತೇಸರ ವಾಸುದೇವ ಆಸ್ರಣ್ಣ ಆಶೀರ್ವಚನಗೈದರು. ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಈಶ್ವರ್ ಕಟೀಲ್ ಪುಟ್ ಬಾಲ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಾಲೇಜಿನ ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು. ಪ.ಪೂ. ಶಿಕ್ಷಣ ಇಲಾಖಾ ಉಪ ನಿರ್ದೇಶಕ ಪ್ರೊ. ಕೆ. ಆರ್. ತಿಮ್ಮಯ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ಮುಖ್ಯೋಪಾಧ್ಯಾಯ ಬೇಲಾಡಿ ವಿಠಲಶೆಟ್ಟಿ, ನಿವೃತ್ತ ಶಿಕ್ಷಕ ಕೇಶವ ಹೊಳ್ಳ, ಶಿಕ್ಷಕ ರಕ್ಷಕ ಸಂಘ ನಿಕಟ ಪೂರ್ವ ಅಧ್ಯಕ್ಷ ಅಧ್ಯಕ್ಷ ಮೋನಪ್ಪ ಶೆಟ್ಟಿ, ಶಿಕ್ಷಕ ರಕ್ಷಕ ಸಂಘ ಉಪಾಧ್ಯಕ್ಷೆ ಲೆನ್ನಿ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಕಾಲೇಜು ಪ್ರಾಚಾರ್ಯ ಜಯರಾಮ ಪೂಂಜ ಸ್ವಾಗತಿಸಿದರು. ಉಪನ್ಯಾಸಕ ಸುರೇಶ್ ಶೆಟ್ಟಿ ಹಾಗೂ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Kinnigoli19121201

 ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಶುಭಾಶಂಸನೆಗೈದರು.

Comments

comments

Leave a Reply

Read previous post:
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಷಷ್ಠಿ ಹಗಲು ರಥೋತ್ಸವ

ಕಿನ್ನಿಗೋಳಿ: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಹಾಗೂ ವಾರ್ಷಿಕ ಮಹೋತ್ಸವದ ಅಂಗವಾಗಿ ಮಂಗಳವಾರ ಹಗಲು ರಥೋತ್ಸವ ನಡೆಯಿತು.  

Close