ಕಟೀಲು ಪ.ಪೂ. ಕಾಲೇಜು ವಾರ್ಷಿಕೋತ್ಸವ

ಕಿನ್ನಿಗೋಳಿ: ಇವತ್ತಿನ ಯಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಕ್ರೀಡೆ ಹಾಗೂ ಸಮಾಜದಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು. ಸ್ವಪ್ರಯತ್ನ ಮುಖ್ಯ ಎಂದು ಮುಲ್ಕಿ ಮೂಡಬಿದಿರೆ ಶಾಸಕ ಅಭಯಚಂದ್ರ ಜೈನ್ ಹೇಳಿದರು.
ಗುರುವಾರ ನಡೆದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕಟೀಲು ದೇವಳ ಅನುವಂಶಿಕ ಆಡಳಿತ ಮೊಕ್ತೇಸರ ವಾಸುದೇವ ಆಸ್ರಣ್ಣ, ಪೋಲೀಸ್ ಅಧಿಕಾರಿ ಡಾ.ಎಚ್.ಎಸ್.ವೆಂಕಟೇಶ ಪ್ರಸನ್ನ, ಕಟೀಲು ದೇವಳ ಆಡಳಿತಾಧಿಕಾರಿ ಡಾ| ಹರೀಶ್ ಕುಮಾರ್ ಕೆ., ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಈಶ್ವರ್ ಕಟೀಲ್, ನಿಕಟ ಪೂರ್ವ ಅಧ್ಯಕ್ಷ ಅಧ್ಯಕ್ಷ ಮೋನಪ್ಪ ಶೆಟ್ಟಿ, ಕಾಲೇಜು ಪ್ರಾಚಾರ್ಯ ಜಯರಾಮ ಪೂಂಜ, ವಿದ್ಯಾರ್ಥಿ ನಾಯಕ ದುರ್ಗಾಪ್ರಸಾದ್ ದಿವಾಣ ಮತ್ತ್ತಿತರರು ಉಪಸ್ಥಿತರಿದ್ದರು.

Kinnigoli24121202

Comments

comments

Leave a Reply

Read previous post:
ಸಂಸ್ಕೃತ ಎಂ.ಎ -ಪ್ರಥಮ ರಾಂಕ್

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾ ಸಂಸ್ಕೃತ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ವಿದ್ಯಾರ್ಥಿನಿ ನಂದಿನಿ ಎಂ. ಮಂಗಳೂರು ವಿವಿ 2011-12ನೇ ಸಾಲಿನ ಸಂಸ್ಕೃತ ಎಂಎ ಪರೀಕ್ಷೆಯಲ್ಲಿ...

Close