ಕಿನ್ನಿಗೋಳಿ ರೋಟರಿ ಶಾಲೆ : ಹಳೆವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ

ಕಿನ್ನಿಗೋಳಿ : ಸೇವೆ ಮತ್ತು ಶಾಂತಿಯ ಸಂದೇಶ ಹೊತ್ತ ಕಿನ್ನಿಗೋಳಿ ರೋಟರಿ ಸಂಸ್ಥೆ ೨೫ ವರ್ಷಗಳ ಹಿಂದೆ ಕಿನ್ನಿಗೋಳಿಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೊಸ್ಕರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸಿ ಉತ್ತಮ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಶಿಸ್ತು, ಸಂಯಮ ಹಾಗೂ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಸೇವೆ ನೀಡಬೇಕು ಹಾಗೂ ದೇಶದ ಏಳಿಗೆಗಾಗಿ ಶ್ರಮಿಸಬೇಕು ಎಂದು ಮುಂಬಯಿಯ ಶಿಕ್ಷಣ ತಜ್ಙ ಧರ್ಮಾನಂದ ಕುಂದರ್ ಹೇಳಿದರು.

ಇತ್ತೀಚೆಗೆ ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯ ರಜತಮಹೋತ್ಸವದ ಅಂಗವಾಗಿ ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿವೃತ್ತ ಶಿಕ್ಷಕಿಯರಾದ ಜೆಸಿಂತಾ ಸಲ್ಡಾನ, ಎಮಿಲ್ಡಾ ಪಿಂಟೊ ಹಾಗೂ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಹಳೇವಿದ್ಯಾರ್ಥಿ ಚಿರಾಗ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ರೋಟರಿ ಅಧ್ಯಕ್ಷ ಕಳ್ಳಿಗೆ ಬಾಲಕೃಷ್ಣ ಶೆಟ್ಟಿ, ಎಳತ್ತೂರು ಮಹಾಲಿಂಗೇಶ್ವರ ದೇವಳ ಆಡಳಿತ ಮೊಕ್ತೇಸರ ಸಂತೋಷಕುಮಾರ್ ಹೆಗ್ಡೆ, ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಅಧ್ಯಕ್ಷ ದಿನೇಶ್ ಆಚಾರ್ಯ, ಶಾಲಾ ಸಮಿತಿ ಕಾರ್ಯದರ್ಶಿ ಪಿ. ಸತೀಶ್ ರಾವ್, ಮುಖ್ಯಶಿಕ್ಷಕ ಗಿಲ್ಬರ್ಟ್ ಡಿ’ಸೋಜ ಉಪಸ್ಥಿತರಿದ್ದರು.
ಹಳೇ ವಿದ್ಯಾ ರ್ಥಿ ಸಂಘ ಅಧ್ಯಕ್ಷ ಪ್ರತೀಕ್ ಶೆಟ್ಟಿ ಸ್ವಾಗತಿಸಿ ಕಾರ್ಯದರ್ಶಿ ಚಿರಾಗ್ ಶೆಟ್ಟಿ ವಂದಿಸಿ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-25121201Kinnigoli Rotary School

Comments

comments

Leave a Reply

Read previous post:
ವಿಜಯೋತ್ಸವ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಜೆ.ಪಿ. ಬೆಂಬಲಿತ ಜನಾರ್ಧನ ಕಿಲೆಂಜೂರು ಹಾಗೂ ಉಪಾಧ್ಯಕ್ಷೆ ಸರೋಜಿನಿ ಇವರು ವಿಜಯೋತ್ಸವದ ಸಂಭ್ರಮದಲ್ಲಿ.  

Close