ಕಿಲೆಂಜೂರು ಶಾಲಾ ಆವರಣ ಗೋಡೆ ಗುದ್ದಲಿ ಪೂಜೆ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಲೆಂಜೂರು ಕಿರಿಯ ಪ್ರಾಥಮಿಕ ಶಾಲಾ ಆವರಣ ಗೋಡೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಅನುದಾನದಿಂದ 1.89 ಲಕ್ಷ ಮಂಜೂರಾಗಿದ್ದು, ಗುದ್ದಲಿ ಪೂಜೆಯನ್ನು ಕಿಲೆಂಜೂರು ಪದ್ಮನಾಭ ಮಾಡ ಹಾಗೂ ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್ ನೆರವೇರಿಸಿದರು.
ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಮಾಜಿ ಅಧ್ಯಕ್ಷೆ ಶೈಲಾ ಶೆಟ್ಟಿ, ಪಂಚಾಯಿತಿ ಸದಸ್ಯರಾದ ಕೇಶವ ಕರ್ಕೆರ, ತಾರಾ ಶೆಟ್ಟಿ, ಜಯಶಂಕರ ರೈ, ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ, ಎಸ್.ಡಿ. ಎಮ್. ಸಿ. ಅಧ್ಯಕ್ಷೆ ರತ್ನ ಮತ್ತಿತರರು ಉಪಸ್ಥಿತರಿದ್ದರು.

KInnigoli-29121201

Comments

comments

Leave a Reply

Read previous post:
ಕಿನ್ನಿಗೋಳಿ ರೋಟರಿ ಶಾಲೆ ವಾರ್ಷಿಕೋತ್ಸವ

ಕಿನ್ನಿಗೋಳಿ : ವಿದ್ಯಾರ್ಥಿಗಳಲ್ಲಿ ಸ್ವಚಿಂತನೆ, ಸ್ವಾವಲಂಬನೆ, ಸೃಜನಶೀಲತೆ ಬಹಳ ಕಡಿಮೆಯಾಗಿದೆ. ಶಿಕ್ಷಣ ಸಂಸ್ಥೆಗಳು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಆಂತರಿಕ ಭಾವನೆಗಳನ್ನು ಅರಿತು ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ಶಿಕ್ಷಣ...

Close