ಕೆರೆಕಾಡು ಶ್ರೀ ವಿನಾಯಕ ಮಕ್ಕಳ ಮೇಳ ವಾರ್ಷಿಕೋತ್ಸವ

ಕಿನ್ನಿಗೋಳಿ : ವ್ಯಕ್ತಿತ್ವ ರೂಪಿಸಿಕೊಳ್ಳಲು ಪುಸ್ತಕ ಜ್ಞಾನದ ಜೊತೆಗೆ ಯಕ್ಷಗಾನದ ಮೂಲಕ ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸುವ ಅಗತ್ಯವಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅತ್ಯಗತ್ಯ ಎಂದು ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಬೆಂಗಳೂರು ಇವರ ಸಹಯೋಗದೊಂದಿಗೆ ಭಾನುವಾರ ನಡೆದ ಕೆರೆಕಾಡು ಶ್ರೀ ವಿನಾಯಕ ಯಕ್ಷ ಕಲಾ ತಂಡ ಮಕ್ಕಳ ಮೇಳದ 5ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಸದಸ್ಯ ದುಗ್ಗಣ್ಣ ಯು., ಯುಗಪುರುಷದ ಪ್ರಧಾನ ಸಂಪಾದಕ ಕೆ ಭುವನಾಭಿರಾಮ ಉಡುಪ, ಮುಲ್ಕಿ ನಗರಪಾಲಿಕೆ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಕಿಲ್ಪಾಡಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಶಾರದ ವಸಂತ್, ಮಕ್ಕಳ ಮೇಳದ ಗೌರವ ಸಲಹೆಗಾರರು ವಾದಿರಾಜ ಉಪಾಧ್ಯಾಯ, ಗುರುರಾಜ್ ಎಸ್. ಪೂಜಾರಿ ಉದ್ಯಮಿ ಮಯ್ಯದ್ದಿ ಹಾಗೂ ಜನಾರ್ಧನ ಉಪಸ್ಥಿತರಿದ್ದರು.
ಮಕ್ಕಳ ಮೇಳದ ಅಧ್ಯಕ್ಷ ಜಯಂತ ಅಮೀನ್ ಸ್ವಾಗತಿಸಿ, ಉಮೇಶ್ ಜೆ. ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Kinnigoli-04021307

Comments

comments

Leave a Reply

Read previous post:
ಮೂಲ್ಕಿ ದೇವಾಡಿಗ ಸಂಘದ ವಾರ್ಷಿಕ ಸತ್ಯನಾರಾಯಣ ಪೂಜೆ

ಮೂಲ್ಕಿ ದೇವಾಡಿಗ ಸಮಾಜ ಸಂಘದ ವಾರ್ಷಿಕ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಮೂಲ್ಕಿ ವಲಯ ಸಮಾಜ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು. ಈ ಸಮಾರಂಭದ...

Close