ಕಿನ್ನಿಗೋಳಿ ಪುರುಷ ಪ್ರೇರಣಾ ಶಿಬಿರ

ಕಿನ್ನಿಗೋಳಿ: ಮಹಿಳೆಯರನ್ನು ಪುರುಷರು ಸಮಾಜದ ಮುಖ್ಯವಾಹಿನಿಗೆ ತರಲು ಸ್ಪಂದಿಸಬೇಕು ಎಂದು ದ.ಕ ಹಾಲು ಉತ್ಪಾದಕರ ಒಕ್ಕೂಟ ಉಪ ವ್ಯವಸ್ಥಾಪಕ ಡಿ.ಎಸ್.ಹೆಗ್ಡೆ ಹೇಳಿದರು.
ಭಾರತ ಸರಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನವದೆಹಲಿ, ಕರ್ನಾಟಕ ಹಾಲು ಮಹಾ ಮಂಡಳಿ ಬೆಂಗಳೂರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಮೆನ್ನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಸೋಮವಾರ ಯುಗಪುರುಷ ಸಭಾಂಗಣದಲ್ಲಿ ನಡೆದ ಪುರುಷ ಪ್ರೇರಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಶಿಕ್ಷಕ, ಸಾಹಿತಿ ಉಮೇಶ್ ರಾವ್ ಎಕ್ಕಾರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಮೆನ್ನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಅಧ್ಯಕ್ಷೆ ವಾಣಿ ವೈ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವೈದ್ಯಾಧಿಕಾರಿ ಡಾ| ಸಂಪತ್ ಕುಮಾರ್, ದ.ಕ.ಹಾ.ಉ.ಒಕ್ಕೂಟ ಸಹಾಯಕ ವ್ಯವಸ್ಥಾಪಕ ವಿ.ಸುಬ್ಬಾ ರಾವ್, ಯುಗಪುರುಷದ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಉಪಸ್ಥಿತರಿದ್ದರು.
ವನಜ ಶೆಟ್ಟಿ ಸ್ವಾಗತಿಸಿ, ಜಗದೀಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli25021303

Kinnigoli25021304

Comments

comments

Leave a Reply

Read previous post:
ಕಟೀಲು-ನೇತ್ರ ಚಿಕಿತ್ಸಾ ಶಿಬಿರ

Sharath Kinnigoli ಕಿನ್ನಿಗೋಳಿ:  ಕಿನ್ನಿಗೋಳಿ ರೋಟರಿ, ಇನ್ನರ್ ವೀಲ್ ಕ್ಲಬ್ ಹಾಗೂ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಶನಿವಾರ ನಡೆಯಿತು. ಕಿನ್ನಿಗೋಳಿ...

Close