ಅಜಾರು ನಿಡ್ಡೋಡಿ ರಸ್ತೆ ಗುದ್ದಲಿ ಪೂಜೆ

ಕಿನ್ನಿಗೋಳಿ : ಕರ್ನಾಟಕ ಸರಕಾರದ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ 4.58 ಕಿ.ಮೀ. ಉದ್ದದ 167.67 ಲಕ್ಷ ರೂ. ವೆಚ್ಚದಲ್ಲಿ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಟ್ಟ ಅಜಾರು-ಜಲಕದ ಕಟ್ಟೆ- ನರ್ತಿಕಲ್ಲು- ನಿಡ್ಡೋಡಿ ನೂತನ ರಸ್ತೆಯ ಗುದ್ದಲಿ ಪೂಜೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲು ನೆರವೇರಿಸಿದರು.
ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಭುವನಾಭಿರಾಮ ಉಡುಪ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ರಾಮ್ ಗೋಪಾಲ್, ರೋಸಿ ಪಿಂಟೊ, ಕಸ್ತೂರಿ ಪಂಜ, ಪ್ರತೀಕ್ ಶೆಟ್ಟಿ, ಆದರ್ಶಶೆಟ್ಟಿ, ಲೋಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-14031301

Comments

comments

Leave a Reply

Read previous post:
ತೋಕೂರು-ಉಚಿತ ದಂತ ಚಿಕಿತ್ಸೆ ಮತ್ತು ಮಾಹಿತಿ ಶಿಬಿರ

ಕಿನ್ನಿಗೋಳಿ: ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ನಿಯಮಿತ ಆಹಾರ ಹಾಗೂ ವ್ಯಾಯಾಮವನ್ನು ರೂಢಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ರೋಟರಿ ಜಿಲ್ಲೆ 3180 ವಲಯ 3ರ ನಿಯೋಜಿತ ವಲಯ ಸೇನಾನಿ...

Close