ಕಿನ್ನಿಗೋಳಿ : ಆರೋಗ್ಯ ಮತ್ತು ಪೌಷ್ಠಿಕ ಆಹಾರ ಶಿಬಿರ

ಕಿನ್ನಿಗೋಳಿ: ನಿಯಮಿತ ಆಹಾರ ಸೇವನೆ ದೇಹದ ಆರೋಗ್ಯ ಕಾಪಾಡುವುದು. ರಾಸಾಯನಿಕ ಸಿಂಪಡಿಸಿದ ಆಹಾರ ಹಾಗೂ ಜಂಕ್ ಪುಡ್‌ಗಳ ಬಗ್ಗೆ ಎಚ್ಚರವಿರಲಿ ಎಂದು ವೈದ್ಯಾಧಿಕಾರಿ ಡಾ| ಕೆ. ಕೃಷ್ಣ ಹೇಳಿದರು
ಭಾರತ ಸರಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನವದೆಹಲಿ, ಕರ್ನಾಟಕ ಹಾಲು ಮಹಾ ಮಂಡಳಿ ಬೆಂಗಳೂರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಮೆನ್ನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಆಶ್ರಯದಲ್ಲಿ ಶನಿವಾರ ಯುಗಪುರುಷ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಪೌಷ್ಠಿಕ ಆಹಾರ ಮಾಹಿತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಮೆನ್ನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಅಧ್ಯಕ್ಷೆ ವಾಣಿ ವೈ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಶಶಿಕಲ, ಸೌಮ್ಯ ಉಪಸ್ಥಿತರಿದ್ದರು.
ವನಿತ ಸ್ವಾಗತಿಸಿ, ಜಗದೀಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-18031303

Comments

comments

Leave a Reply