ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ: ನಮ್ಮ ಮಾತೃ ಭಾಷೆ ಮತ್ತು ಸಂಸ್ಕೃತಿಗೆ ಹೆಚ್ಚು ಆದ್ಯತೆ ನೀಡಿ ಉಳಿಸಿ ಬೆಳಸಿಕೊಳ್ಳಬೇಕು. ಎಂದು ಕಟೀಲು ದೇವಳದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್, ಯುಗಪುರುಷ ಕಿನ್ನಿಗೋಳಿ, ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಮುಲ್ಕಿ ಯುವವಾಹಿನಿ ಸಹಭಾಗಿತ್ವದಲ್ಲಿ ಯುಗಪುರುಷ ಸಭಾಭವನದಲ್ಲಿ ಸೋಮವಾರ ನಡೆದ ತುಳು ಸಿನಿಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತುಳು ಚಲನಚಿತ್ರ ನಿರ್ಮಾಪಕ ಮಾಲಾಡಿ ಬಾಲಕೃಷ್ಣ ಶೆಟ್ಟಿ ಅವರನ್ನು ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ರೋಟರ‍್ಯಾಕ್ಟ್ ಜಿಲ್ಲಾ ಸಭಾಪತಿ ಜಯರಾಂ ಕೋಟ್ಯಾನ್, ಮೂಲ್ಕಿ ಯುವವಾಹಿನಿ ಅಧ್ಯಕ್ಷ ರಾಮಚಂದ್ರ ಕೋಟ್ಯಾನ್, ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಕಿನ್ನಿಗೋಳಿ ರೋಟರಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕಳ್ಳಿಗೆ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಇನ್ನರ್ ವೀಲ್ ಕ್ಷಬ್ ಅಧ್ಯಕ್ಷೆ ಮಮತಾ ಶೆಟ್ಟಿ, ರೋಟರ‍್ಯಾಕ್ಟ್ ಮಾಜಿ ಕೆನರಾವಲಯ ಪ್ರತಿನಿಧಿ ಹರೀಶ್ ಅಡ್ಯಾರ್ ಮತ್ತಿತರರು ಉಪಸ್ಥಿತರಿದ್ದರು.
ಕಿನ್ನಿಗೋಳಿ ರೋಟರ‍್ಯಾಕ್ಟ್ ಅಧ್ಯಕ್ಷ ರಾಜೇಶ್ ಕೆಂಚನಕೆರೆ ಸ್ವಾಗತಿಸಿದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-19031303

Kinnigoli-19031304

Kinnigoli-19031305

Comments

comments

Leave a Reply

Read previous post:
ಎಸ್.ಕೋಡಿ ರೋಡ್

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅನುದಾನದಿಂದ ಎಸ್.ಕೋಡಿ ಬಸ್ ನಿಲ್ದಾಣದ ಬಳಿ ೭೦,೦೦೦ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಇಂಟರ್‌ಲಾಕ್ ಕಾಮಗಾರಿಯನ್ನು ಸೋಮವಾರ ರಿಕ್ಷಾ ಚಾಲಕ ಮಾಲಕರ ಸಂಘದ...

Close