ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು : ಕೆ. ಲವ ಶೆಟ್ಟಿ

Suresh Padmanoor
ಕಿನ್ನಿಗೋಳಿ: ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದ್ದು ಸಂಘಟನೆಗಳ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೆ. ಲವ ಶೆಟ್ಟಿ ಹೇಳಿದರು.
ಕಿನ್ನಿಗೋಳಿ ಸರಾಫ್ ಅಣ್ಣಯ್ಯಾ ಆಚಾರ್ಯ ಸಭಾಭವನದಲ್ಲಿ ಭಾನುವಾರ ನಡೆದ ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಮತ್ತು ಶ್ರೀ ಕಾಳಿಕಾಂಬಾ ಮಹಿಳಾ ವೃಂದದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ವಾಸ್ತು ಶಿಲ್ಪಿ ಕೆ. ದಿನೇಶ್ ಆಚಾರ್ಯ ಪಡುಬಿದ್ರಿ ಹಾಗೂ ಸಾಧಕಿ ಶ್ರುತಿ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷ ಜನರ್ಧಾನ ಕಿಲೆಂಜೂರು ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರಿ ಜಯಶ್ರೀ ಅಮರನಾಥ ಶೆಟ್ಟಿ, ಮ.ನ.ಪಾ ಮಂಗಳೂರು ಕಾರ್ಪೋರೇಟರ್ ಜಯಂತಿ ಹರೀಶ್ ಆಚಾರ್ಯ, ಎ.ಪಿ.ಎಂ.ಸಿ ಸದಸ್ಯ ಪ್ರಮೋದ್ ಕುಮಾರ್, ಸರಾಫ್ ಅಣ್ಣಯ್ಯಾ ಆಚಾರ್ಯ ಸಭಾಭವನ ಸಮಿತಿ ಅಧ್ಯಕ್ಷ ಪ್ರಥ್ವಿರಾಜ್ ಆಚಾರ್ಯ, ಶ್ರೀ ಕಾಳಿಕಾಂಬಾ ಮಹಿಳಾ ವೃಂದದ ಅಧ್ಯಕ್ಷೆ ರತ್ನಾ ಪ್ರಭಾಕರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ. ದಿನೇಶ್ ಆಚಾರ್ಯ ಸ್ವಾಗತಿಸಿದರು, ಕಾರ್ಯದರ್ಶಿ ಉದಯ ಕುಮಾರ್ ಹಾಗೂ ಗೀತಾಂಜಲಿ ವರದಿ ವಾಚಿಸಿದರು, ಕೆ.ಬಿ. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

Kinnigoli23041302

Kinnigoli23041303

Kinnigoli23041304

Kinnigoli23041305

Kinnigoli23041306

Kinnigoli23041307

Comments

comments

Leave a Reply

Read previous post:
ವಸಂತ ವೇದ ಶಿಬಿರ

Raghunath Kamath ಕಿನ್ನಿಗೋಳಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಬೇಕು. ವಿದ್ಯಾರ್ಥಿ ಹಂತದಲ್ಲಿಯೇ ಸಂಸ್ಕೃತಿ ಸಂಸ್ಕಾರಗಳನ್ನು ಭೋದಿಸಿ ಬದುಕಿನ ಮೌಲ್ಯಗಳನ್ನು ತುಂಬಿಸಿ ಭವಿಷ್ಯ ರೂಪಿಸಲು ಹಿರಿಯರು ಸಹಕಾರ...

Close