ಧರ್ಮ ಸಂಸ್ಕೃತಿ ಉಳಿಸಿ ಬೆಳೆಸಿ: ಡಾ| ಪದ್ಮನಾಭ ಭಟ್

ಕಿನ್ನಿಗೋಳಿ : ಯುವ ಜನಾಂಗ ಪಾಶ್ಚಾತ್ಯ ಸಂಸ್ಕೃತಿಯ ಒಳಿತುಗಳನ್ನು ಮಾತ್ರ ತಮ್ಮ ಜೀವನದಲ್ಲಿ ಅಳವಡಿಸಿ ಕೆಡುಕು ಹಾಗೂ ದುಶ್ಚಟಗಳಿಂದ ದೂರವಿರಬೇಕು. ವೈಜ್ಞಾನಿಕ ಹಿನ್ನಲೆಯುಳ್ಳ ನಮ್ಮ ಧರ್ಮ ಸಂಸ್ಕೃತಿಗಳನ್ನು ಉಳಿಸಿ ಬೆಳೆಸಿ ಸಮಾಜದ ಭವ್ಯ ತಳಹದಿಗೆ ನಾಂದಿಯಾಗಬೇಕು. ಎಂದು ತುಳು ಅಕಾಡೆಮಿ ಸದಸ್ಯ ಉಪನ್ಯಾಸಕ ಡಾ| ಪದ್ಮನಾಭ ಭಟ್ ಎಕ್ಕಾರು ಹೇಳಿದರು.
ಸುರಗಿರಿ ಮಹಾಲಿಂಗೇಶ್ವರ ದೇವಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುರಗಿರಿ ಯುವಕ ಮಂಡಲದ ೪೩ ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ದಿ| ಕೋಡು ಗುರುರಾಜ ಭಟ್ ಪ್ರಶಸ್ತಿಯನ್ನು ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ, ಸಮಾಜ ಸೇವಕಿ ಸಾವಿತ್ರಿ ಶೆಟ್ಟಿ ಅವರಿಗೆ ನೀಡಿ ಸನ್ಮಾನಿಸಲಾಯಿತು. ಎಳತ್ತೂರು ಮಹಾಲಿಂಗೇಶ್ವರ ದೇವಳ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ದೇವಳದ ಅರ್ಚಕ ವಿಶ್ವೇಶ ಭಟ್, ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಮೊಕ್ತೇಸರ ಬಾಲಚಂದ್ರ ಭಟ್, ಶಿಕ್ಷಕ ಸಾಯಿನಾಥ ಶೆಟ್ಟಿ, ಯುವಕ ಮಂಡಲ ಅಧ್ಯಕ್ಷ ಸಚಿನ್ ಶೆಟ್ಟಿ, ಮಹಿಳಾ ಮಂಡಲ ಅಧ್ಯಕ್ಷೆ ಶಕಿಲಾ ಶೆಟ್ಟಿ ಉಪಸ್ಥಿತರಿದ್ದರು.
ಕೃಷ್ಣರಾಜ ಭಟ್ ಸ್ವಾಗತಿಸಿ, ದಯಾನಂದ ಶೆಟ್ಟಿ ವರದಿ ವಾಚಿಸಿದರು. ಜನಾರ್ಧನ ಕಿಲೆಂಜೂರು ವಂದಿಸಿದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-29041301

Comments

comments

Leave a Reply

Read previous post:
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳ ಪಲ್ಲಕಿ ಉತ್ಸವ

ಕಿನ್ನಿಗೋಳಿ : ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಲ್ಲಕಿ ಉತ್ಸವ ನಡೆಯಿತು.

Close