ಕರ್ನಿರೆ ಶಾಲಾ ಪ್ರಾರಂಭೋತ್ಸವ

ಕಿನ್ನಿಗೋಳಿ: ಕರ್ನಿರೆ ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ ಶುಕ್ರವಾರ ನಡೆಯಿತು. ಸರಕಾರದ ವತಿಯಿಂದ ಪಠ್ಯ ಪುಸ್ತಕ ಹಾಗೂ ಮುಂಬಯಿ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ನೀಡಲಾಯಿತು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಕರ್ನಿರೆ, ಹರಿಶ್ಚಂದ್ರ ಶೆಟ್ಟಿ, ರವೀಂದ್ರ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಮಲ್ಲಿಕ ಬಿ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಪ್ರಭಾವತಿ, ಸಹಶಿಕ್ಷಕಿಯರಾದ ಧರ್ಮಾವತಿ, ಜೆಸಿಂತಾ ಸಲ್ಡಾನ್ಹ ಉಪಸ್ಥಿತರಿದ್ದರು.

Mulki-1051301

Comments

comments

Leave a Reply

Read previous post:
ಬಿಜೆಪಿ-ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಕಿನ್ನಿಗೋಳಿ: ಮುಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲಿ ಭಾನುವಾರ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮಂಗಳೂರು...

Close