ಬಿಜೆಪಿ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಕಿನ್ನಿಗೋಳಿ: ಅಡಿಕೆ ಕೃಷಿಯ ಬಗ್ಗೆ ತಜ್ಞರಲ್ಲಿ ಚರ್ಚಿಸಿ ಬೆಳೆಗಾರರಿಗೆ ಪರ್ಯಾಯ ವ್ಯವಸ್ಥೆ ಮಾಡಿ ನಂತರ ಗುಟ್ಕಾ ನಿಷೇಧ ಜಾರಿ ಮಾಡುವ ಚಿಂತನೆ ಮಾಡಬೇಕು. ದ್ವೇಷದ ರಾಜಕಾರಣ ಸಲ್ಲದು. ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲಿ ಭಾನುವಾರ ನಡೆದ ಮುಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

೪೩ ಹೊಸ ತಾಲೂಕುಗಳನ್ನು ರದ್ದು ಮಾಡುವ ಅಭಿಪ್ರಾಯ ಸರಿಯಲ್ಲ ಕಾಂಗ್ರೇಸ್ ಮಂತ್ರಿಗಳು ಮತ್ತು ಶಾಸಕರು ಅವಾಂತರ ಸೃಷ್ಟಿಸುವ ಹೇಳಿಕೆ ಹಾಗೂ ನಡವಳಿಕೆಗಳನ್ನು ನಿಲ್ಲಿಸಿ ಜನಉಪಯೋಗಿ ಪಾರದರ್ಶಕ ಆಡಳಿತ ನೀಡಬೇಕು ಎಂದು ಮಂತ್ರಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮುಲ್ಕಿ ಮೂಡಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದೆ. ಸೋಲು ಗೆಲುವು ಸಹಜ ಜನಪರ ಕಾಳಜಿಯ ಹೋರಾಟ ಬಿಜೆಪಿಗೆ ಇದೆ. ಮುಂದಿನ ಯಶಸ್ಸಿಗೆ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ವಿಧಾನ ಸಭೆ ಚುನಾವಣೆಯಲ್ಲಿ ಮುಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಉಮಾನಾಥ ಕೋಟ್ಯಾನ್ ಕಾರ್ಯಕರ್ತರನ್ನು ಶ್ಲಾಘಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಭುವನಾಭಿರಾಮ ಉಡುಪ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುಚರಿತ ಶೆಟ್ಟಿ, ಮುಲ್ಕಿ ಮೂಡಬಿದಿರೆ ಬಿಜೆಪಿ ಕ್ಷೇತ್ರಾಧ್ಯಕ್ಷೆ ಕಸೂರಿ ಪಂಜ ಪ್ರಧಾನ ಕಾರ್ಯದರ್ಶಿ ಆದರ್ಶ್ ಶೆಟ್ಟಿ ಎಕ್ಕಾರು, ಪ್ರಸಾದ್ ಬೆಳ್ತಂಗಡಿ ಉಪಸ್ಥಿತರಿದ್ದರು. ಜಯಂತ್ ಸ್ವಾಗತಿಸಿ, ದಿವಾಕರ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು.

Kinnigoli03061301

Kinnigoli03061302

Comments

comments

Leave a Reply

Read previous post:
ರಾಜರತ್ನಪುರ ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ : ಕಿನ್ನಿಗೋಳಿ ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ರಾಜರತ್ನಪುರ ಹಾಗೂ ಕಿನ್ನಿಗೋಳಿ ಗೋಶಿನ್ ರ‍್ಯೂ ಶೈಲಿ ಕರಾಟೆ ಸಂಸ್ಥೆಯ ಜಂಟೀ ಸಹಯೋಗದಲ್ಲಿ ಪರಿಸರದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು...

Close