ಕಿನ್ನಿಗೋಳಿ ರೋಟರಿ: ಅಧ್ಯಕ್ಷರ ಸಂಜೆ

ಕಿನ್ನಿಗೋಳಿ : ಬದುಕಿನ ಸಾರ್ಥಕತೆ ಕಂಡುಕೊಳ್ಳಲು ಸೇವೆ ಅತ್ಯುತ್ತಮವಾದ ಮಾರ್ಗ. ಸಹಾಯ ಪ್ರವೃತ್ತಿ, ವ್ಯಕ್ತಿತ್ವ ವಿಕಸನದ ಮೂಲಕ ಸಮಾಜವನ್ನು ಬಲಪಡಿಸಬೇಕು ಎಂದು ರೋಟರಿ ವಲಯ 3ರ ಸಹಾಯಕ ಗವರ್ನರ್ ಮನೋಹರ್ ರಾವ್ ಹೇಳಿದರು.
ಸೋಮವಾರ ಕಿನ್ನಿಗೋಳಿಯ ಸಹಕಾರ ಸೌಧದಲ್ಲಿ ನಡೆದ ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷರ ಸಂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಲಯ 3ರ ವಲಯ ಸೇನಾನಿ ರತ್ನಾಕರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಜಯರಾಮ ಪೂಂಜ, ನಿಯೋಜಿತ ಅಧ್ಯಕ್ಷ ರಾಬರ್ಟ್ ರುಸಾರಿಯೋ ಉಪಸ್ಥಿತರಿದ್ದರು.
ರೋಟರಿ ಅಧ್ಯಕ್ಷ ಕಳ್ಳಿಗೆ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಯಶವಂತ ಐಕಳ ವಂದಿಸಿದರು, ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-27061304

Comments

comments

Leave a Reply

Read previous post:
Kinnigoli-27061303
ಎಮ್.ಆರ್.ಪೂಂಜ ಐ.ಟಿ.ಐ : ವಿದ್ಯಾರ್ಥಿ ವೇತನ

P.V.Rao ಕಿನ್ನಿಗೋಳಿ : ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವವನ್ನು ಕೊಟ್ಟು ತಮ್ಮ ತಮ್ಮ ವೃತ್ತಿಯಲ್ಲಿ ಪರಿಶ್ರಮದಿಂದ ಶ್ರೇಷ್ಠತೆಯನ್ನು ಸಾಧಿಸಿದರೆ ಜೀವನದಲ್ಲಿ ಯಶಸ್ಸನ್ನು ಕಾಣಬಹುದು, ಕೆರೆಯ ನೀರನು ಕೆರೆಗೆ ಚೆಲ್ಲಿ...

Close