ಕೆಮ್ರಾಲ್ ಮೀನು ಮಾರುಕಟ್ಟೆ ಉದ್ಘಾಟನೆ

ಕಿನ್ನಿಗೋಳಿ: ಸರಕಾರದ ಯೋಜನೆಗಳು, ಅನುದಾನಗಳು ಸಾರ್ಥಕ ಸದ್ಬಳಕೆಯಾಗಬೇಕಾದರೆ ಇಲಾಖೆಗಳ ಮಹತ್ವಾಕಾಂಕ್ಷೆಯ ಚಿಂತನೆ ಹಾಗೂ ಕ್ರಿಯಾತ್ಮಕ ಕಾರ್ಯಸೂಚಿ ಅವಶ್ಯಕತೆಯಿರುತ್ತದೆ. ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಹೊಣೆಗಾರಿಕೆ ಜನಪ್ರತಿನಿಧಿಗಳ ಮೇಲಿದೆ ಎಂದು ಯುವಜನ ಸೇವೆ ಮತ್ತು ಮೀನುಗಾರಿಕ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಇದರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಕೆಮ್ರಾಲ್ ಮೀನು ಮಾರುಕಟ್ಟೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಮೀನುಗಾರಿಕೆಗೆ ಸಂಬಂದಪಟ್ಟ ಕಾಮಾಗಾರಿಗಳು ಅಲ್ಲದೆ ಮೀನುಗಾರಿಕೆ ಇಲಾಖೆಯ ವ್ಯಾಪ್ತಿಗೆ ಬರುವ ಕರಾವಳಿ ತೀರದ ಮೀನುಗಾರಿಕಾ ರಸ್ತೆಗಳು ತೀರ ಹದಗೆಟ್ಟಿದ್ದು ಅವುಗಳ ಅಭಿವೃದ್ಧಿ ಪಡಿಸಲು 25ಕೋಟಿ ರೂ ಬಜೆಟ್‌ನಲ್ಲಿ ಇರಿಸಲಾಗುವುದು, 30ಕೋಟಿ ರೂ ವೆಚ್ಚದಲ್ಲಿ ಜಟ್ಟಿ ನಿರ್ಮಾಣ ಕಾಮಗಾರಿಗಳು ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭ ಜಲಾನಯನ ಇಲಾಖೆಯ ಸಮಗ್ರ ಜಲಾನಯನ ಅಭಿವೃದ್ಧಿ ಘಟಕ ನಿರ್ವಹಣಾ ಯೋಜನೆ ವತಿಯಿಂದ ಕೃಷಿಕರಿಗೆ ಗಿಡಗಳನ್ನು ವಿತರಿಸಲಾಯಿತು.
ಕೆಮ್ರಾಲ್ ಪಂಚಾಯಿತಿ ಅಧ್ಯಕ್ಷೆ ರೇವತಿ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಸಾವಿತ್ರಿ ಜಿ ಸುವರ್ಣ, ಕೆಮ್ರಾಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಿಚಾರ್ಡ್ ಡಿಸೋಜ, ಜಲಾನಯನ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಪಿ.ಎಫ್. ಮಿರಾಂದ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ವಿ.ಕೆ ಶೆಟ್ಟಿ ಪ್ರಸ್ತಾವನೆಗೈದು ಸ್ವಾಗತಿಸಿದರು. ವಿಶಾಲಾಕ್ಷಿ ವಂದಿಸಿ ಸುರೇಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

Kinnigoli-08071306

Kinnigoli-08071307

Kinnigoli-08071308

Comments

comments

Leave a Reply

Read previous post:
Kinnigoli-08071305
ಉಲ್ಲಂಜೆ ಯಕ್ಷಗಾನ, ಯೋಗ, ತರಗತಿಗಳ ಉದ್ಘಾಟನೆ

ಕಿನ್ನಿಗೋಳಿ: ಪ್ರಬಲ ಮನೋಸ್ಥೈರ್ಯವಿದ್ದರೆ ಕಲಿಕೆಯಲ್ಲಿ ಉತ್ತಮ ಸಾಧನೆ ಹೊಂದಬಹುದು. ಲಲಿತಕಲೆ ಹಾಗೂ ಯೋಗ ಶಿಕ್ಷಣದಂತಹ ಅಭ್ಯಾಸದಿಂದ ಶಾಲೆಗಳಲ್ಲಿ ಸಂಸ್ಕಾರಯುತ ಶಿಕ್ಷಣ ಸಿಗುವುದು. ಎಂದು ಕಟೀಲು ದೇವಳ ಅರ್ಚಕ ಶ್ರೀಹರಿನಾರಾಯಣದಾಸ...

Close