ಡಾ|| ದೊಡ್ಡರಂಗೇಗೌಡ- ಕೊ.ಅ.ಉಡುಪ ಪ್ರಶಸ್ತಿ

ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ದಿ| ಕೊ.ಅ.ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಗೌರವಪೂರ್ವಕವಾಗಿ ನೀಡಲಾಗುವ ಕೊ.ಅ. ಉಡುಪ ಪ್ರಶಸ್ತಿಯನ್ನು ಈ ಬಾರಿ ಹಿರಿಯ ಸಾಹಿತಿ, ಹತ್ತು ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಕನ್ನಡ ಪ್ರಾಧ್ಯಾಪಕ ಬೆಂಗಳೂರಿನ ಡಾ|| ದೊಡ್ಡರಂಗೇಗೌಡರವರಿಗೆ ನೀಡಲಾಗುವುದು.
ಶಿಕ್ಷಣ, ಸಾಹಿತ್ಯ, ಚಲನಚಿತ್ರ, ಸುಗಮ ಸಂಗೀತ ಹೀಗೆ ಹಲವು ಕ್ಷೇತ್ರಗಳಲ್ಲಿ ಏಕ ಕಾಲದಲ್ಲಿ ತಮ್ಮ ಪ್ರತಿಭೆಯನ್ನು ತೊಡಗಿಸಿಕೊಂಡ ಸೃಜನಶೀಲರಾಗಿರುವ ಡಾ|| ದೊಡ್ಡರಂಗೇಗೌಡರು ಸ್ನಾತಕೋತ್ತರ ಪದವೀಧರರು. ಇವರ ಬರಹಗಳು ಯುಗಪುರುಷ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಾ ಬಂದಿವೆ. ಯುಗಪುರುಷ ಮಾತ್ರವಲ್ಲದೆ ರಾಜ್ಯದ ಹಿರಿಯ ಕಿರಿಯ ಪತ್ರಿಕೆಗಳಲ್ಲೂ ಇವರ ಬರಹಗಳು ಪ್ರಕಟಗೊಂಡಿವೆ. ಈವರೆಗೆ ಸುಮಾರು 80 ವಿವಿಧ ರೀತಿಯ ಕೃತಿಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಹೆಸರನ್ನು ಚಿರಸ್ಥಾಯಿಗೊಳಿಸಿದ್ದಾರೆ. ಹಾಗೆಯೇ 500ಕ್ಕೂ ಹೆಚ್ಚು ಕನ್ನಡ ಚಿತ್ರಗೀತೆಗಳನ್ನು ಬರೆದು ಮನೆ ಮಾತಾಗಿದ್ದಾರೆ. 80ಕ್ಕೂ ಮಿಕ್ಕಿ ಧ್ವನಿಸುರುಳಿಗಳು ಪ್ರಕಟವಾಗಿವೆ. 100ಕ್ಕೂ ಹೆಚ್ಚು ದೂರದರ್ಶನ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆಗಳನ್ನು ರಚಿಸಿದ್ದಾರೆ. ಇವರಿಗೆ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳು ಲಭಿಸಿವೆ.
ಕೊ.ಅ.ಉಡುಪ ಪ್ರಶಸ್ತಿಯನ್ನು ಇದೇ ಜುಲೈ 24ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಜರಗಲಿರುವ ಕೊ.ಅ.ಉಡುಪ ಸಂಸ್ಮರಣ ಸಮಾರಂಭದಲ್ಲಿ ರೂ. 10,000/- ನಗದು, ಗೌರವ ಫಲಕ, ಪ್ರಶಸ್ತಿ ಪತ್ರದೊಂದಿಗೆ ಪ್ರದಾನ ಮಾಡಲಾಗುವುದು ಎಂದು ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kinnigoli-1071303

Comments

comments

Leave a Reply

Read previous post:
Kinnigoli-1071302
ಐಕಳ ಪಂಚಾಯಿತಿ ವಿಶೇಷ ಗ್ರಾಮ ಸಭೆ

ಕಿನ್ನಿಗೋಳಿ: ಐಕಳ ಗ್ರಾಮ ಪಂಚಾಯಿತಿಯ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮಂಗಳವಾರ ಕಿರೆಂ ಚರ್ಚ್ ಮಿನಿಹಾಲ್‌ನಲ್ಲಿ...

Close