ಯುಗಪುರುಷ -“ಭವಿಷ್ಯ” ಕೃತಿ ಬಿಡುಗಡೆ

ಕಿನ್ನಿಗೋಳಿ: ಕಿನ್ನಿಗೋಳಿ ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತಗೊಂಡ, ಹರಿಶ್ಚಂದ್ರ ಪಿ. ಸಾಲ್ಯಾನ್ ರಚಿತ ಜ್ಯೋತಿಷ್ಯಕ್ಕೆ ಸಂಬಂಧಪಟ್ಟ ಲೇಖನಗಳ ಕೃತಿ “ಭವಿಷ್ಯ” ಬಿಡುಗಡೆ ಸಮಾರಂಭ ದಿನಾಂಕ 20ರಂದು ಬೆಳಿಗ್ಗೆ ಗಂಟೆ 11.30ಕ್ಕೆ ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರಗಲಿದೆ. ಕೃತಿಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಯುವಜನ ಸೇವಾ ಹಾಗೂ ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಬಿಡುಗಡೆಗೊಳಿಸಲಿದ್ದಾರೆ.
ಮೂಲ್ಕಿ ಶ್ರೀ ಹರಿಹರ ಕ್ಷೇತ್ರದ ಆಡಳಿತ ಮೋಕ್ತೇಸರ ಅರವಿಂದ ಪೂಂಜಾ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಶಶಿಕಾಂತ ಶೆಟ್ಟಿ, ಮೂಲ್ಕಿ ಬಿಲ್ಲವ ಸಂಘ ಅಧ್ಯಕ್ಷ ಯದೀಶ್ ಅಮೀನ್, ಸಾಹಿತಿ ಎನ್. ಪಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಾಶಕ ಕೊಡೆತ್ತೂರು ಭುವನಾಭಿರಾಮ ಉಡುಪ, ಕೃತಿ ರಚಿತ ಹರಿಶ್ಚಂದ್ರ ಪಿ. ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

comments

Leave a Reply

Read previous post:
Kinnigoli12071307
ಪೊಂಪೈ ಕಾಲೇಜು ಮಧ್ಯಾಹ್ನದ ಬಿಸಿಯೂಟಕ್ಕೆ ಚಾಲನೆ

ಕಿನ್ನಿಗೋಳಿ: ಐಕಳ ಪೊಂಪೈ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ಉಚಿತ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕಾಲೇಜು ಪ್ರಿನ್ಸಿಪಾಲ್ ಡಾ| ಜೋನ್ ಕ್ಲಾರೆನ್ಸ್ ಮಿರಾಂದ ಸೋಮವಾರ ಚಾಲನೆ ನೀಡಿದರು. ಯೋಜನೆಯ...

Close