ಇನ್ನರ್ ವೀಲ್ ಕ್ಲಬ್ ಪದಗ್ರಹಣ

ಕಿನ್ನಿಗೋಳಿ: ಸಮಾಜ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಅತಿ ಮುಖ್ಯ. ಸೇವಾಚಟುವಟಿಕೆಗಳಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡಾಗ ಸಾಮಾಜಿಕ ಸಂಬಂಧಗಳು ಗಟ್ಟಿಯಾಗುತ್ತದೆ ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜು ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥೆ ಮೌಲ್ಯ ಜೀವನ್ ಹೇಳಿದರು.
ಶನಿವಾರ ಕಿನ್ನಿಗೋಳಿ ಹೋಟೆಲ್ ಅಭಿನಂದನ್ ಸಭಾಭವನದಲ್ಲಿ ನಡೆದ ಕಿನ್ನಿಗೋಳಿ ಇನ್ನರ್ ವೀಲ್ ಕ್ಲಬ್ ನ 2013-14 ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ನೂತನ ಅಧ್ಯಕ್ಷೆ ಸಿಂತಿಯಾ ಕುಟಿನ್ಹೊ ಹಾಗೂ ಕಾರ್ಯದರ್ಶಿ ರಂಜಿತಾ ಶೆಟ್ಟಿ ಅವರ ತಂಡ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ರಾಬರ್ಟ್ ರೊಸಾರಿಯೊ ಉಪಸ್ಥಿತರಿದ್ದರು.
ಆರ್ಥಿಕ ಹಿಂದುಳಿದವರಿಗೆ ಮನೆಕಟ್ಟಲು ಸಹಾಯ, ಕುಮಾರಿ ಸುಪ್ರಿಯಾ ಅವರ ಶಿಕ್ಷಣಕ್ಕೆ ಧನ ಸಹಾಯ, ಮೇರಿವೆಲ್ ಅನಾಥಾಶ್ರಮ ಹಾಗೂ ಬಲ್ಲಾಣ ಪ್ರೀತಿ ಸದನ ಅನಾಥಾಶ್ರಮದ ಮಕ್ಕಳಿಗೆ ವೈದ್ಯಕೀಯ ಕಿಟ್ ಮತ್ತು ಕೊಡೆಗಳನ್ನು ವಿತರಿಸಲಾಯಿತು.
ಇನ್ನರ್ ವೀಲ್ ಮಾಜಿ ಅಧ್ಯಕ್ಷೆ ಮಮತಾ ಶೆಟ್ಟಿ ಸ್ವಾಗತಿಸಿದರು, ಸವಿತಾ ಶೆಟ್ಟಿ ವಂದಿಸಿದರು, ಶಾಲೆಟ್ ಪಿಂಟೊ ಮತ್ತು ವೀಣಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-1807201301

Comments

comments

Leave a Reply

Read previous post:
Kinnigoli-17071302
ವೇಗ ನಿಯಂತ್ರಕ ಅಳವಡಿಸಲು ಮನವಿ

ಕಿನ್ನಿಗೋಳಿ: ಐಕಳ ಪೊಂಪೈ ಕಾಲೇಜು ವಿದ್ಯಾರ್ಥಿಗಳು ಕಾಲೇಜಿನ ಪಕ್ಕದಲ್ಲಿ ಹಾದು ಹೋಗುವ ರಸ್ತೆಯ ಎರಡು ಕಡೆಗಳಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸುವಂತೆ ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಇತ್ತೀಚೆಗೆ ಮನವಿ...

Close