ಕಿನ್ನಿಗೋಳಿ-ಆಳ್ವಾಸ್ ವಿಶ್ವನುಡಿಸಿರಿ

ಕಿನ್ನಿಗೋಳಿ: ಪೂರ್ವಜರ ಶ್ರೀಮಂತ ಭಾಷೆ ಮತ್ತು ವೈಜ್ಞಾನಿಕ ತಳಹದಿಯ ಸಂಸ್ಕೃತಿಗಳನ್ನು ಉಳಿಸಿ ಬೆಳೆಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಜನರ ಸಹಕಾರದಿಂದ ಕನ್ನಡ ಸೇವೆ ಮಾಡಲು ಸಾಧ್ಯ. ಸುಂದರವಾದ ಮನಸ್ಸುಗಳನ್ನು ಕಟ್ಟಲು, ವಿಶ್ವದ ನಾನಾ ಕಲೆಗಳನ್ನು ಒಂದೇ ಕಡೆ ನೋಡುವಂತಾಗಲು, ನಮ್ಮವರೂ ವಿಶ್ವ ಕಲಾವಿದರಾಗಿ ಬೆಳೆಯಲು ಈ ವೇದಿಕೆ ಭದ್ರ ತಳಪಾಯ. ಕಳೆದ ಹತ್ತು ವರುಷದಿಂದಲೂ ಕನ್ನಡಾಭಿಮಾನಿಗಳ ಸಹಕಾರದಿಂದ ನುಡಿಸಿರಿ ನುಡಿಸುತ್ತಿದ್ದೇನೆ, ಕೋಟ್ಯಾಂತರ ಕನ್ನಡಿಗರ ಆಶೀರ್ವಾದದಿಂದ ವಿಶ್ವನುಡಿಸಿರಿ ಬೆಳಗಲಿದೆ ಎಂದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭಾವನದಲ್ಲಿ ಶನಿವಾರ ನಡೆದ ಆಳ್ವಾಸ್ ವಿಶ್ವನುಡಿಸಿರಿ ವಿರಾಸತ್ ಕಿನ್ನಿಗೋಳಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಭಾಷೆ, ಸಂಸ್ಕೃತಿ ಮೂಲಕ ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ನುಡಿಸಿರಿ-ವಿರಾಸತ್ ಮಾಡುತ್ತಿದೆ ಎಂದು ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಕಿನ್ನಿಗೋಳಿ ಘಟಕ ಉದ್ಘಾಟಿಸಿ ಮಾತನಾಡಿದರು.
ಕಟೀಲು ಪದವಿ ಕಾಲೇಜು ಪ್ರಿನ್ಸಿಪಾಲ್ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಿನ್ನಿಗೋಳಿ ಚರ್ಚ್ ಧರ್ಮಗುರು ಫಾ| ಅಲ್ಫ್ರೆಡ್ ಜೆ. ಪಿಂಟೊ, ಐಕಳ ಪೊಂಪೈ ಪದವಿ ಕಾಲೇಜು ಪ್ರಿನ್ಸಿಪಾಲ್ ಡಾ| ಕ್ಲಾರೆನ್ಸ್ ಮಿರಾಂದ, ಕಟೀಲು ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಪ್ರೊ. ಜಯರಾಮ ಪೂಂಜ, ಸಾಹಿತಿ ಕೆ.ಜಿ. ಮಲ್ಯ, ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಲವ ಶೆಟ್ಟಿ, ಕಿನ್ನಿಗೋಳಿ ಕಾನ್ಸೆಟ್ಟಾ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಸಿ. ಜೀವಿತಾ, ಸುರಗಿರಿ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಲಯನ್ಸ್ ಪ್ರಾಂತೀಯ ಮಾಜಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಪತ್ರಕರ್ತ ಶರತ್ ಶೆಟ್ಟಿ, ಪ್ರಥ್ವಿರಾಜ್ ಎಂ. ಆಚಾರ್ಯ, ಐಕಳ ರಾಮಣ್ಣ ಶೆಟ್ಟಿ, ಶಿಬರೂರು ಗುತ್ತು ಗುತ್ತಿನಾರ್ ಉಮೇಶ್ ಶೆಟ್ಟಿ, ಪಂಜ ಗುತ್ತು ಶಾಂತರಾಮ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಕಿನ್ನಿಗೋಳಿ ಪಂಚಾಯಿತಿ ಸದಸ್ಯ ಟಿ.ಎಚ್. ಮಯ್ಯದ್ಧಿ, ಕಿನ್ನಿಗೋಳಿ ರೋಟರಿ ಅಧ್ಯಕ್ಷ ರಾಬರ್ಟ್ ರುಸಾರಿಯೋ, ಇನ್ನರ್ ವೀಲ್ ಅಧ್ಯಕ್ಷೆ ಸಿಂತಿಯಾ ಕುಟಿನ್ಹೊ, ಲಯನ್ಸ್ ಅಧ್ಯಕ್ಷ ವೈ.ಕೃಷ್ಣ ಸಾಲ್ಯಾನ್, ಮುಲ್ಕಿ ಯುವವಾಹಿನಿ ಮಾಜಿ ಅಧ್ಯಕ್ಷ ಚಂದ್ರಶೇಖರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಯುಗಪುರುಷದ ಭುವನಾಭಿರಾಮ ಉಡುಪ ಸ್ವಾಗತಿಸಿದರು. ಪು. ಗುರುಪ್ರಸಾದ್ ಭಟ್ ಕಟೀಲು ವಂದಿಸಿದರು. ಆಳ್ವಾಸ್ ಕಾಲೇಜು ಉಪನ್ಯಾಸಕಿ ಸುಧಾರಾಣಿ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ವೈಭವದ ಅಂಗವಾಗಿ ವಿವಿಧ ರಾಜ್ಯಗಳ ಹಾಗೂ ವಿದೇಶದ ನೃತ್ಯ ಹಾಗೂ ವೈವಿದ್ಯಮಯ ಕಲಾಪ್ರಕಾರಗಳು ಪ್ರದರ್ಶನಗೊಂಡವು.

Kinnigoli23071306

Comments

comments

Leave a Reply

Read previous post:
Kinnigoli23071305
ಕಿನ್ನಿಗೋಳಿ ಬೃಹತ್ ಜನಜಾಗೃತಿ ಜಾಥಾ

ಕಿನ್ನಿಗೋಳಿ: ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಗ್ರಾಮ ಮಟ್ಟದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ರೋಗಗಳ ವಿರುದ್ದ ಜನ ಜಾಗೃತಿ ಮೂಡಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಬಹು...

Close