ಕಟೀಲು ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ.

ಕಿನ್ನಿಗೋಳಿ: ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಯೊಬ್ಬನ ಬೌದ್ಧಿಕ ಮಾನಸಿಕ ವಿಕಸನಕ್ಕೆ ದಾರಿ ದೀಪವಾಗಲಿದೆ. ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣ ಹಾಗೂ ಶೃದ್ದಾ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಮೈಗೂಡಿಸಬೇಕು ಎಂದು ಕಟೀಲು ದೇವಳ ಆಡಳಿತಾಧಿಕಾರಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಚಟುವಟಿಕೆಗಳ ಸಂಘಗಳನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಆಶೀರ್ವಚನಗೈದ ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಮಾತನಾಡಿ ವಿದ್ಯೆಯು ಸುಜ್ಞಾನಕ್ಕೆ ದಾರಿಯಾಗಿದೆ. ಎಂದರು.
ಕಟೀಲು ದೇವಳ ಕಾಲೇಜು ಪ್ರಿನ್ಸಿಪಾಲ್ ಪ್ರೋ| ಎಂ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ “ನಮ್ಮ ದೇಶದ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಜ್ಞಾನವನ್ನು ಹೆಚ್ಚಿಸಿಕೊಳ್ಳುವ, ಗುರುಹಿರಿಯರನ್ನು ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಎಂದು ಹೇಳಿದರು.
ಉಪನ್ಯಾಸಕ ಜಗದೀಶ್ಚಂದ್ರ ಪ್ರತಿಜ್ಷಾ ವಿಧಿ ಭೋಧಿಸಿದರು.
ಕಾಲೇಜು ವಿದ್ಯಾರ್ಥಿ ಸಂಘ ಅಧ್ಯಕ್ಷ ದೀಪಕ್, ಉಪಾಧ್ಯಕ್ಷ ಕಾರ್ತಿಕ್ ಭಂಡಾರಿ, ಕಾರ್ಯದರ್ಶಿ ಕಾರ್ತಿಕ್ ನಾಯಕ್, ಜೊತೆ ಕಾರ್ಯದರ್ಶಿ ವಿದ್ಯಾ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪರಿಪಾಲನಾಧಿಕಾರಿ ಕೃಷ್ಣ ಕಾಂಚನ್ ಸ್ವಾಗತಿಸಿ, ಕಾಲೇಜು ವಿದ್ಯಾರ್ಥಿ ಸಂಘ ಅಧ್ಯಕ್ಷ ದೀಪಕ್ ವಂದಿಸಿದರು. ವಿದ್ಯಾರ್ಥಿನಿ ನವ್ಯ ಕಾರ್ಯಕ್ರಮ ನಿರೂಪಿಸಿದರು.

Kinnigoli-27071305

Kinnigoli-27071306

 

Comments

comments

Leave a Reply

Read previous post:
Kinnigoli-27071304
ಕಮ್ಮಾಜೆ ಶಾಲೆಯಲ್ಲಿ ವನಮಹೋತ್ಸವ

 ಕಿನ್ನಿಗೋಳಿ:  ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ ಕಟೀಲ್ ಗಿಡ ನೆಡುವುದರ ಮೂಲಕ ವನ ಮಹೋತ್ಸವಕ್ಕೆ ಚಾಲನೆ ನೀಡಿದರು. ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷ...

Close