ಕೆಮ್ರಾಲ್ – ವಿಶೇಷ ಗ್ರಾಮ ಸಭೆ

ಕಿನ್ನಿಗೋಳಿ: ಕೆಮ್ರಾಲ್ ಗ್ರಾಮ ಪಂಚಾಯಿತಿಯ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಬುಧವಾರ ಕೆಮ್ರಾಲ್ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆಯಿತು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಲೆಕ್ಕ ಪರಿಶೋಧನೆ ಸಂಯೋಜಕ ರಾಜು ಸಾಲ್ಯಾನ್ ಮಾಹಿತಿ ನೀಡಿ ಮಾತನಾಡಿದರು.
ಯೋಜನೆಯಲ್ಲಿ ಶರಣದಿಂದ ಮುಲ್ಲಟ್ಟ ವರೆಗೆ ರಸ್ತೆ ರಚನೆ ಹಾಗೂ ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರ ವಠಾರದಲ್ಲಿ ಜೈವಿಕ ಇಂಧನದ ಗಿಡ ನೆಡುವಿಕೆ 2 ಕಾಮಗಾರಿಗಳು ನಡೆದಿವೆ ಒಟ್ಟು 155799 ವೆಚ್ಚವಾಗಿದೆ ಎಂದು ಲೆಕ್ಕಪರಿಶೋಧನೆ ವರದಿಯಲ್ಲಿ ತಿಳಿಸಲಾಯಿತು.
ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಂಜೀವ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ಶೆಟ್ಟಿಗಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್ ಬಿ., ಹಾಗೂ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

kinnigoli0108201301

Comments

comments

Comments are closed.

Read previous post:
Kinnigoli-29071313
ನಿಡ್ಡೋಡಿ ಸ್ಥಳ ವೀಕ್ಷಣೆಗೆ ಗ್ರಾಮಸ್ಥರ ತಡೆ

ನಿಡ್ಡೋಡಿ : ಬಂಗೇರಪದವುನಲ್ಲಿ ಸೋಮವಾರ ಬೆಳಗ್ಗೆದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ತಂಡ ನಿಡ್ಡೋಡಿಯಲ್ಲಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪಿಸಲು ಉದ್ದೇಶಿಸಿರುವ ಸ್ಥಳದ ವೀಕ್ಷಣೆ ಹಾಗೂ ನಿಡ್ಡೋಡಿ ಪರಿಸರದ ವಸ್ತು ಸ್ಥಿತಿಯನ್ನು...

Close