ಕಟೀಲು ಶಾಲೆಯಲ್ಲಿ ಕ್ಷೀರ ಭಾಗ್ಯ ಯೋಜನೆ

ಕಿನ್ನಿಗೋಳಿ: ಮಕ್ಕಳಲ್ಲಿನ ಅಪೌಷ್ಟಿಕ ಮತ್ತು ರಕ್ತ ಹೀನತೆ ಹೋಗಲಾಡಿಸಿ ಸಧೃಡ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಸರಕಾರ ಕ್ಷೀರ ಭಾಗ್ಯ ಯೋಜನೆ ಜಾರಿಗೆ ತಂದಿರುವುದು ಶ್ಲಾಘನೀಯ ಎಂದು ಕಟೀಲು ದೇವಳ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಹೇಳಿದರು.
ಕಟೀಲು ದೇವಳ ಶಾಲೆಯಲ್ಲಿ ಶುಕ್ರವಾರ ನಡೆದ ಕ್ಷೀರ ಭಾಗ್ಯ ಯೋಜನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಟೀಲು ದೇವಳ ಅನುವಂಶಿಕ ಮೋಕ್ತೇಸರ ವಾಸುದೇವ ಆಸ್ರಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ಮೆನ್ನಬೆಟ್ಟು ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಕಟೀಲು ಫ್ರೌಢ ಶಾಲಾ ವೈಸ್ ಪ್ರಿನ್ಸಿಪಾಲ್ ಸುರೇಶ್ ಭಟ್, ಹಿರಿಯ ಶಿಕ್ಷಕ ಕೆ.ವಿ. ಶೆಟ್ಟಿ, ಪ್ರಾಥಮಿಕ ಶಾಲಾ ಸಹ ಶಿಕ್ಷಕಿ ವನಮಾಲ, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ವೆಂಕಟರಮಣ ಹೆಗಡೆ ಉಪಸ್ಥಿತರಿದ್ದರು.
ಶಿಕ್ಷಕ ಸಾಯಿನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli03081301

Comments

comments

Comments are closed.