ಮೂಲ್ಕಿ ಮೂಡಬಿದ್ರೆ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ಸುಚರಿತ ಶೆಟ್ಟಿ ಆಯ್ಕೆ

ಕಿನ್ನಿಗೋಳಿ : ಮೂಲ್ಕಿ ಮೂಡಬಿದ್ರೆ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ಸುಚರಿತ ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು. ಶನಿವಾರ ಕಿನ್ನಿಗೊಳಿ ಯುಗಪುರುಷ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಹಿರಿಯ ಬಿಜೆಪಿ ನಾಯಕ, ಮಾಜಿ ಶಾಸಕ ರುಕ್ಮಯ ಪೂಜಾರಿಯವರು ಚುನಾವಣೆಯನ್ನು ನಡೆಸಿಕೊಟ್ಟರು. ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೊಡೆತ್ತೂರು ಭುವನಾಭಿರಾಮ ಉಡುಪ, ಕೆ.ಪಿ.ಜಗದೀಶ ಅಧಿಕಾರಿ, ಉಮಾನಾಥ ಕೋಟ್ಯಾನ್, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಜ್ಯೇಷ್ಠ ಪಡಿವಾಳ್, ನಿಕಟಪೂರ್ವ ಅಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಸಮಿತಿ ಸದಸ್ಯ ಕೆ.ಆರ್.ಪಂಡಿತ್, ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಿತೇಶ್ ಶೆಟ್ಟಿ, ದ.ಕ.ಜಿ.ಪಂ.ಸದಸ್ಯರಾದ ಈಶ್ವರ್ ಕಟೀಲು, ಆಶಾ ಆರ್. ಸುವರ್ಣ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್, ಆದರ್ಶ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಭೋಜರಾಜ ಶೆಟ್ಟಿ, ದಿವಾಕರ ಸಾಮಾನಿ, ಜಯಂತ್ ಸಾಲ್ಯಾನ್, ರಮಾನಾಥ್ ಅತ್ತಾರ್, ತಾಲೂಕು ಪಂಚಾಯತ್ ಅಧ್ಯಕ್ಷ ಹರೀಶ್, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ಮತ್ತಿತರರು ಉಪಸ್ಥಿತರಿದ್ದರು.

Kinnigoli18081323

Comments

comments

Comments are closed.

Read previous post:
Kinnigoli18081322
ಕಿನ್ನಿಗೋಳಿ 14 ಇಂಟರಾಕ್ಟ್ ಸಂಸ್ಥೆಗಳ ಪದಗ್ರಹಣ ಸಮಾರಂಭ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಿ ಸಂಸ್ಥೆಯಿಂದ ಪ್ರವರ್ತಿಸಲಾದ 14 ಇಂಟರಾಕ್ಟ್ ಸಂಸ್ಥೆಗಳ ಪದಗ್ರಹಣ ಶನಿವಾರ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಕಿನ್ನಿಗೋಳಿ ರೋಟರಿ ಅಧ್ಯಕ್ಷ ರಾಬರ್ಟ್ ರುಸಾರಿಯೋ ನೂತನ ಅಧ್ಯಕ್ಷ...

Close