ಕಿನ್ನಿಗೋಳಿಯಲ್ಲಿ ಸ್ವಾಸ್ಥ್ಯ ಸಂಕಲ್ಪ

ಕಿನ್ನಿಗೋಳಿ: ವಿದ್ಯಾರ್ಥಿಗಳು ಯುವಜನತೆ ದುಶ್ಚಟಗಳಿಂದ ದೂರವಿದ್ದು ತಮ್ಮ ಆರೋಗ್ಯ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಶ್ರಮಿಸಬೇಕಾದ ಅಗತ್ಯವಿದೆ ಎಂದು ಮೂಲ್ಕಿ ಸರಕಾರಿ ಕಾಲೇಜಿನ ಪ್ರಾಂಶುಪಾಲೆ ಗ್ರೆಟ್ಟಾ ಮೊರಾಸ್ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಿನ್ನಿಗೋಳಿ ವಲಯದ ಆಶ್ರಯದಲ್ಲಿ ಕಿನ್ನಿಗೋಳಿ ಲಿಟ್ಲ್ ಫ್ಲವರ್ ಪ್ರೌಢ ಶಾಲೆಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತಾಡಿದರು.
ಯುಗಪುರುಷ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಲಿಟ್ಲ್ ಫ್ಲವರ್ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಸಿಸ್ಟರ್ ದಿವಿನಾ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಲೀರಾ ಮರಿಯಾ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಪಿ. ಹೆಗ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸತೀಶ್, ಒಕ್ಕೂಟದ ಅಧ್ಯಕ್ಷೆ ಯಶೋದಾ, ಶ್ರೀನಿವಾಸ, ಶಶಿಕಾಂತ ರಾವ್ ಶ್ರೀಕಲಾ, ಮತ್ತಿತರರಿದ್ದರು.

Nammakinnigoli-14091323

Comments

comments

Comments are closed.

Read previous post:
Nammakinnigoli-14091314
ಕಿನ್ನಿಗೋಳಿ ಶ್ರೀ ಗಣೇಶೋತ್ಸವ ಶೋಭಾಯಾತ್ರೆ

ಕಿನ್ನಿಗೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಶೋಭಾಯಾತ್ರೆ 

Close