ಕಿನ್ನಿಗೋಳಿ : ಕರೋಕೆ ಗಾಯನ ಸ್ಪರ್ಧೆ

ಕಿನ್ನಿಗೋಳಿ : ಯುವ ಪ್ರತಿಭೆಗಳಿಗೆ ಸ್ಪೂರ್ತಿ ಹಾಗೂ ಉತ್ತಮ ವೇದಿಕೆ ಕಲ್ಪಿಸಿದಾಗ ಸುಪ್ತ ಪ್ರತಿಭೆಗಳು ಅನಾವರಣಗೊಳ್ಳುತ್ತದೆ. ಎಂದು ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು ಹೇಳಿದರು.
ಭಾನುವಾರ ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲಿ ನಡೆದ ಕರಾವಳಿಯ ಯುವ ಗಾಯಕ-ಗಾಯಕಿಯರಿಗಾಗಿ, ಜನನಿ ಮೆಲೋಡಿಸ್ ಕಿನ್ನಿಗೋಳಿ ಆಯೋಜಿಸಿದ ಕರೋಕೆ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಿನ್ನಿಗೋಳಿ ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಕಿನ್ನಿಗೋಳಿ ಗ್ರಾ. ಪಂ. ಸದಸ್ಯ ಆನಂದಗೌಡ, ರಘುರಾಮ ಪುನರೂರು, ರೋಟರ‍್ಯಾಕ್ಟ್ ಕ್ಲಬ್ ಮಾಜಿ ಅಧ್ಯಕ್ಷ ರಾಜೇಶ್ ಕೆಂಚನಕೆರೆ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸಿಂತಿಯಾ ಕುಟಿನ್ಹೊ, ಕೋಳಿ ನೃತ್ಯಗಾರ ಅಶೋಕ್ ಪೊಳಲಿ, ಗೋಳಿಜೋರ ಶ್ರೀ ರಾಮ ಯುವಕ ವೃಂದ ಅಧ್ಯಕ್ಷ ಶ್ರೀಪತಿ ಗೋಳಿಜೋರ, ಜನನಿ ಮೆಲೋಡಿಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು. ರಾಜೇಂದ್ರ ಎಕ್ಕಾರು. ಕಾರ್ಯಕ್ರಮ ನಿರೂಪಿಸಿದರು.

Kinnigoli-15091302

Comments

comments

Comments are closed.

Read previous post:
ಏಳಿಂಜೆ ಉಚಿತ ವೈದ್ಯಕೀಯ ತಪಸಣಾ ಶಿಬಿರ

ಕಿನ್ನಿಗೋಳಿ : ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಿಯಮಿತ ಆಹಾರ, ತಪಾಸಣೆ ನಡೆಸಿದಾಗ ಉತ್ತಮ ಆರೋಗ್ಯ ಕಂಡುಕೊಳ್ಳಬಹುದು. ಸಂಘ ಸಂಸ್ಥೆಗಳು ಇಂತಹ ಸಮಾಜ ಉಪಯೋಗಿ ಕಾರ್ಯಗಳನ್ನು ಸಂಘಟಿಸಬೇಕು...

Close