ಕಿನ್ನಿಗೋಳಿ : ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ

ಕಿನ್ನಿಗೋಳಿ: ಪ್ರಾಮಾಣಿಕ ಶಿಸ್ತು ಬದ್ಧ ಜೀವನ ನಡೆಸಿ ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಇತರರರಿಗೆ ಮಾದರಿಯಾಗಬೇಕು. ಎಂದು ಮುಲ್ಕಿ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಹೇಳಿದರು.

ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ರಿಕ್ಷಾ ಚಾಲಕ ಮಾಲಕರ ಸಂಘದ ಸಭೆಯಲ್ಲಿ ನಡೆದ ಪೋಲೀಸ್ ಮಾಹಿತಿ ಶಿಬಿರ ಹಾಗೂ ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.
ರಿಕ್ಷಾ ಚಾಲಕರ ಮಾಲಕರ ಸಂಘದ ಗೌರವಾಧ್ಯಕ್ಷ ಕೆ. ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆಯನ್ನು ಸಂಘದ ವತಿಯಿಂದ ವಿತರಿಸಲಾಯಿತು ಹಾಗೂ 2 ಮಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯ ಹಸ್ತ ನೀಡಲಾಯಿತು.
ಮುಲ್ಕಿ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ರಿಕ್ಷಾ ಚಾಲಕರಿಗೆ ರಸ್ತೆ ಸುರಕ್ಷಿತೆ, ಪ್ರಾಥಮಿಕ ಚಿಕಿತ್ಸೆ ಹಾಗೂ ಕಾನೂನು ಬಗ್ಗೆ ಮಾಹಿತಿ ನೀಡಿದರು.
ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಉಮೇಶ ಬಂಗೇರ ಐಕಳ, ಉದ್ಯಮಿ ಸುಧಾಕರ ಶೆಟ್ಟಿ, ಶಶಿಕಾಂತ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Kinnigoli03101301

Comments

comments

Comments are closed.

Read previous post:
Kinnigoli02101303
ಪೊಂಪೈ ಕಾಲೇಜಿಗೆ – ಟೇಬಲ್ ಟೆನ್ನಿಸ್ ಚಾಂಪಿಯನ್‌ಶಿಪ್

ಕಿನ್ನಿಗೋಳಿ : ಇತ್ತೀಚೆಗೆ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಟೇಬಲ್ ಟೆನ್ನಿಸ್ ಚಾಂಪಿಯನ್‌ಶಿಪ್‌ನಲ್ಲಿ ಐಕಳದ ಪೊಂಪೈ ಕಾಲೇಜಿನ ತಂಡ...

Close