ಪೊಂಪೈ ಎನ್.ಎಸ್.ಎಸ್. ಶಿಬಿರ ಸಮಾರೋಪ

ಕಿನ್ನಿಗೋಳಿ: ವ್ಯಕ್ತಿತ್ವ ವಿಕಸನ, ನಾಯಕತ್ವ, ಸೇವಾ ಮನೋಭಾವನೆ ಹಾಗೂ ಮಾನವೀಯ ಸಂಬಂಧಗಳ ಸರ್ವಾಂಗೀಣ ಬೆಳವಣಿಗೆಗೆಗೆ ಎನ್. ಎಸ್. ಎಸ್. ಶಿಬಿರ ಪೂರಕ ಎಂದು ಕಟೀಲು ದೇವಳ ಕಾಲೇಜು ಪ್ರಾಚಾರ್ಯ ಎಂ. ಬಾಲಕೃಷ್ಣ ಶೆಟ್ಟಿ ಹೇಳಿದರು.
ಸೋಮವಾರ ಕಿನ್ನಿಗೋಳಿ ಕಮ್ಮಾಜೆ ಮೊರಾರ್ಜಿ ವಸತಿ ಶಾಲೆಯಲ್ಲಿ ಪೊಂಪೈ ಪದವಿ ಕಾಲೇಜಿನ ಎನ್. ಎಸ್. ಎಸ್‌ನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಮಾತನಾಡಿದರು.
ಪೊಂಪೈ ಕಾಲೇಜು ಸಂಚಾಲಕ ಫಾ| ಪಾವ್ಲ್ ಪಿಂಟೊ ಅಧ್ಯಕ್ಷತೆ ವಹಿಸಿ ಎನ್.ಎಸ್.ಎಸ್. ಶಿಬಿರಗಳಿಂದ ಯುವ ಪ್ರತಿಭೆಗಳು ಅನಾವರಣಗೊಳ್ಳುತ್ತದೆ ಎಂದು ಹೇಳಿದರು.
ಪೊಂಪೈ ಕಾಲೇಜು ಎನ್.ಎಸ್.ಎಸ್. ಶಿಬಿರಾಧಿಕಾರಿ ಡಾ. ಗುಣಕರ್ ಪ್ರಸ್ತಾವನೆಗೈದರು.
ಮಂಗಳೂರು ವಿಶ್ವವಿದ್ಯಾನಿಲಯದ ಎನ್. ಎಸ್. ಎಸ್. ಘಟಕಗಳ ಸಂಚಾಲಕಿ ವಿನೀತಾ ಕೆ., ಜಿಲ್ಲಾ ಶೈಕ್ಷಣಿಕ ಇಲಾಖೆಯ ಪುಟ್ಟಣ್ಣ ಗೌಡ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶೈಲಾ ಸಿಕ್ವೇರಾ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರೋಜಿನಿ, ಐಕಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಮೊರಾರ್ಜಿ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಬಿ., ಮೊರಾರ್ಜಿ ವಸತಿ ಶಾಲಾ ಪೋಷಕರ ಸಮಿತಿ ಅಧ್ಯಕ್ಷೆ ಗೋಪಮ್ಮ , ಪೊಂಪೈ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರಿಯಾ ಸ್ವಾಗತಿಸಿ, ಅಶ್ವಿತಾ ವಂದಿಸಿದರು. ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.

Kinnigoli 19111302

Comments

comments

Comments are closed.