ಕಿನ್ನಿಗೋಳಿಯಲ್ಲಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ಮಕ್ಕಳ ಸುಪ್ತ ಪ್ರತಿಭೆಗಳು ಪ್ರತಿಭಾ ಕಾರಂಜಿಗಳಂತಹ ಕಾರ್ಯಕ್ರಮಗಳಲ್ಲಿ ಅನಾವರಣಗೊಳ್ಳುತ್ತವೆ ಇದನ್ನು ಪೋಷಕರು ಮತ್ತು ಶಿಕ್ಷಕರು ಗುರುತಿಸಿ ಪ್ರೋತ್ಸಾಹ ನೀಡಿದಾಗ ಯುವ ಪ್ರತಿಭೆಗಳು ರೂಪುಗೊಳ್ಳುತ್ತವೆ ಎಂದು ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು ಹೇಳಿದರು.
ದ.ಕ. ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆ ಯ ಜಂಟೀ ಆಶ್ರಯದಲ್ಲಿ ಗುರುವಾರ ನಡೆದ ಫ್ರೌಡ ಶಾಲಾ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ರೋಟರಿ ಅಧ್ಯಕ್ಷ ರಾಬರ್ಟ್ ರೊಸಾರಿಯೋ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ರಘುನಾಥ್, ಸಿ.ಆರ್.ಪಿ. ಜಗದೀಶ್ ನಾವಡ ಉಪಸ್ಥಿತರಿದ್ದರು.
ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕ ಗಿಲ್ಬರ್ಟ್ ಡಿಸೋಜ ಸ್ವಾಗತಿಸಿ ಶಿಕ್ಷಕಿ ಪ್ರತಿಮ ವಂದಿಸಿದರು. ಶಿಕ್ಷಕಿ ಶೈಲಜ ಕಾರ್ಯಕ್ರಮ ನಿರೂಪಿಸಿದರು.

Kinnigoli28111303 Kinnigoli28111304

Comments

comments

Comments are closed.

Read previous post:
Kinnigoli28111301
ರಾಮಾಯಣ ಕೃತಿ ಬಿಡುಗಡೆ

ಕಿನ್ನಿಗೋಳಿ: ಸಾಹಿತಿ ಕೆ. ಜಿ. ಮಲ್ಯ ಸಂಪಾದಿಸಿ ಬರೆದ ಅದ್ಬುತ ರಾಮಾಯಣ ಕೃತಿಯನ್ನು  ಕಾಶೀ ಮಠಾಧೀಶ  ಶ್ರೀ ಸುದೀಂದ್ರ ತೀರ್ಥರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. 

Close