ಹಿರಿಯರ ಮತ್ತು ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ

ಕಿನ್ನಿಗೋಳಿ: ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಫ್ರೌಡಿಮೆ ಬೆಳೆಯಲು ಹಿರಿಯರ ಮತ್ತು ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ.ಎಳೆಯ ವಯಸ್ಸಿನಲ್ಲಿ ಮಕ್ಕಳಿಗೆ ಶಿಷ್ಠಾಚಾರದ ಶಿಕ್ಷಣ ನೀಡಿದಾಗ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಬಲ್ಲರು. ಎಂದು ಕಟೀಲು ದೇವಳದ ಅರ್ಚಕ ಕಮಲದೇವಿ ಪ್ರಸಾದ ಆಸ್ರಣ್ಣ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಅಧ್ಯಕ್ಷತೆ ವಹಿಸಿದರು. ಬಜಪೆ ವ್ಯವಸಾಯ ಸೇವಾ ಸಹಕಾರಿ ಸಂಘ ಬ್ಯಾಂಕ್ ಪ್ರಬಂಧಕ ರತ್ನಾಕರ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕಿ ಜಲಜ.ಎಸ್, ಮೆನ್ನಬೆಟ್ಟು ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಶಾಲೆಯ ಹಳೇ ವಿದ್ಯಾರ್ಥಿಗಳಾದ ಕಿರಣ್ ಶೆಟ್ಟಿ, ಕಲ್ಪೆಶ್ ಶೆಟ್ಟಿ, ಉಲ್ಲಂಜೆ ಮತ್ತು ಪದ್ಮನೂರು ಕ್ಲಸ್ಟರ್ ಸಿ.ಆರ್.ಪಿ. ಜಗದೀಶ್ ನಾವಡ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವೆಂಕಟರಮಣ ಹೆಗ್ಡೆ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕರಾದ ಸರೋಜಿನಿ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕಿ ವೈ ಮಾಲತಿ ವಾರ್ಷಿಕ ವರದಿ ನೀಡಿದರು. ವಾಸುದೇವ ಶೆಣೈ ಕಾರ್ಯಕ್ರಮ ನಿರೂಪಿಸಿದರು.

Kinnigoli01121301

Comments

comments

Comments are closed.

Read previous post:
Kinnigoli30111303
Obituary-Jyothi D’costa (38)

Jyothi D'costa (38) Expired on 30.11.2013 W/o Louis Dsouza , Valpady, Shirthady M/o Lavinia, Leonna, Larren D/o Carmine & Late Antony Dsouza,...

Close