ಕಮ್ಮಾಜೆ ಮೋರಾರ್ಜಿ ದೇಸಾಯಿ ವಸತಿ ಶಾಲೆ

ಕಿನ್ನಿಗೋಳಿ: ಮನೆಯ ವಾತಾವರಣವನ್ನು ಕಲ್ಪಿಸುವ ಹಾಗೂ ಸತತ ನೂರು ಶೇಕಡಾ ಫಲಿತಾಂಶ ದಾಖಲಿಸಿದ ಮೋರಾರ್ಜಿ ದೇಸಾಯಿ ವಸತಿ ಶಾಲೆ ಖಾಸಗಿ ಶಾಲೆಗಳಿಗೆ ಮಾದರಿಯಾಗಿದೆ. ರಾಜ್ಯದ ಬೇರೆ ಬೇರೆ ಭಾಗಗಳ ವಿದ್ಯಾರ್ಥಿಗಳು ಇಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು ವಿವಿಧತೆಯಲ್ಲಿ ಏಕತೆ ಕಾಣುತ್ತಿದೆ ಪೋಷಕರ ಹಾಗೂ ಅಧ್ಯಾಪಕರ ಪರಿಶ್ರಮವೇ ವಿದ್ಯಾರ್ಥಿಗಳ ಭವಿಷ್ಯದ ಮುನ್ನಡೆಗೆ ದಾರಿ ದೀಪವಾಗಿದೆ ಎಂದು ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು ಹೇಳಿದರು.
ಕಿನ್ನಿಗೋಳಿ ಸಮೀಪದ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭ ಮೋರಾರ್ಜಿ ಸಿಂಚನ ಪುಸ್ತಕ ಬಿಡುಗಡೆಗೊಳಿಸಲಾಯಿತು.2012-13ನೇ ಸಾಲಿನ ಎಸ್.ಎಸ್.ಎಲ್.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಾದ ಉಷಾ, ರಶ್ಮಿತಾ ಹಾಗೂ ಮೋಲಿ ಜೊಸೆಫ್ ಅವರನ್ನು ಸನ್ಮಾನಿಸಲಾಯಿತು.
ಮಂಗಳೂರು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮೋಹನ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯ ಸುನೀಲ್ ಸಿಕ್ವೇರಾ, ಉಲ್ಲಂಜೆ ಕ್ಲಸ್ಟರ್ ಸಿ.ಆರ್.ಪಿ. ಜಗದೀಶ್ ನಾವಡ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಗೋಪಮ್ಮ,, ನಾರಾಯಣ ಆಚಾರ್ ಉಪಸ್ಥಿತರಿದ್ದರು.

Kinnigoli02121309 Kinnigoli02121310 Kinnigoli02121311 Kinnigoli02121312

Comments

comments

Comments are closed.

Read previous post:
Kinnigoli02121308
ನಳಿನ್ ಕುಮಾರ್ ಕಟೀಲು ಧನ ಸಹಾಯ

ಕಿನ್ನಿಗೋಳಿ:  ಕೆಲವು ದಿನಗಳ ಹಿಂದೆ ಕಿನ್ನಿಗೋಳಿ ಸಮೀಪದ ಏಳಿಂಜೆ ಶುಂಠಿಪಾಡಿ ಎಂಬಲ್ಲಿನ ಹರೀಶ್ ಪೂಜಾರಿ ಅವರ ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ತೆಂಗಿನ ಕಾಯಿ ಹಾಗೂ ಅಡಿಕೆ ದಾಸ್ತಾನು...

Close