ಕಟೀಲು: ಫ್ರೌಡ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಸತ್ಯವನ್ನೇ ಉಸಿರಾಗಿಸಿಕೊಂಡು ಶ್ರದ್ಧೆ, ಏಕಾಗ್ರತೆ, ಭಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮೂಲಕ ಭವ್ಯ ಭವಿಷ್ಯವನ್ನು ರೂಪಿಸುವ ಕಾರ್ಯ ಹಿರಿಯರು ಹಾಗೂ ಶಿಕ್ಷಕರಿಂದಾಗಬೇಕು ಎಂದು ಕಟೀಲು ದೇವಳ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಹೇಳಿದರು.
ಸೋಮವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಫ್ರೌಡ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಇಂದಿನ ಐಟಿ ಬಿಟಿಯ ಸ್ಪರ್ಧಾತ್ಮಕ ಯುಗದಲ್ಲಿ ಅವಕಾಶವನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು. ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಕೊಟ್ಟು ನಾಯಕತ್ವ ಗುಣ ಬೆಳೆಸಿ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಂಡು ಹೊಸ ಆವಿಷ್ಕಾರಗಳತ್ತ ದಾಪುಗಾಲು ಹಾಕಬೇಕು ಎಂದು ಕಟೀಲು ಫ್ರೌಡ ಶಾಲಾ ಹಳೇ ವಿದ್ಯಾರ್ಥಿ ಹಾಗೂ ಸೈಂಟ್ ಅಲೋಷಿಯಸ್ ಕಾಲೇಜು ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪೊ| ರೋನಾಲ್ಡ್ ಪಿಂಟೊ ಹೇಳಿದರು.
ಕಟೀಲು ಫ್ರೌಡ ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಅನಂತ ಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡಿದರು. ಕಟೀಲು ದೇವಳ ಅನುವಂಶಿಕ ಆಡಳಿತ ಮೊಕ್ತೇಸರ ವಾಸುದೇವ ಆಸ್ರಣ್ಣ ಭ್ರಮರವಾಣಿ ಬಿಡುಗಡೆಗೊಳಿಸಿದರು.
ಮೆನ್ನಬೆಟ್ಟು ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು ಅಧ್ಯಕ್ಷತೆ ವಹಿಸಿದ್ದರು.
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿ ನಾರಾಯಣ ಆಸ್ರಣ್ಣ, ಕಟೀಲು ದೇವಳ ಕಾಲೇಜು ಪ್ರಿನ್ಸಿಪಾಲ್ ಪ್ರೊ| ಎಂ. ಬಾಲಕೃಷ್ಣ ಶೆಟ್ಟಿ, ವಿದ್ಯಾರ್ಥಿ ನಾಯಕಿ ರಕ್ಷಾ ಉಪಸ್ಥಿತರಿದ್ದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಫ್ರೌಡ ಶಾಲೆ ಮುಖ್ಯ ಶಿಕ್ಷಕ ಸುರೇಶ್ ಭಟ್ ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿದರು. ಕೆ.ವಿ. ಶೆಟ್ಟಿ ವಂದಿಸಿದರು. ಶಿಕ್ಷಕ ಸಾಯಿನಾಥ್ ಶೆಟ್ಟಿ, ಶ್ರೀವತ್ಸ ಹಾಗೂ ರಾಜಶೇಖರ ಕಾರ್ಯಕ್ರಮ ನಿರೂಪಿಸಿದರು.

Kinnigoli03121319 Kinnigoli03121320 Kinnigoli03121321

Comments

comments

Comments are closed.

Read previous post:
Kinnigoli03121318
ತೋಕೂರು : N S S ಶಿಬಿರದ ಸಮಾರೋಪ

ಕಿನ್ನಿಗೋಳಿ: ವಿದ್ಯಾರ್ಥಿಗಳು ಎನ್.ಎಸ್.ಎಸ್.ನ ಧ್ಯೇಯೋದ್ದೇಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿದ್ದಲ್ಲಿ ರಾಷ್ರ್ಟೋನ್ನತಿ ಸಾಧ್ಯ, ಮುಂದಿನ ದಿನಗಳಲ್ಲಿ ಭಾರತ ದೇಶವು ವಿಶ್ವದಲ್ಲಿಯೇ ಅತ್ತ್ಯುತ್ತಮ ದೇಶವಾಗಿ ಹೊರಹೊಮ್ಮಲಿದೆ ಇದರಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರ...

Close