ಉಲ್ಲಂಜೆ ಮಕ್ಕಳ ವಿಶೇಷ ಗ್ರಾಮ ಸಭೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಲ್ಲಂಜೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ವಿಶೇಷ ಮಕ್ಕಳ ಗ್ರಾಮ ಸಭೆ ನಡೆಯಿತು.
ಗ್ರಾಮದ ಮೂಲ ಸೌಕರ್ಯಗಳ ಬಗ್ಗೆ ಮಕ್ಕಳ ಗ್ರಾಮ ಸಭೆಯಲ್ಲಿ ಚರ್ಚಿಸಿಲಾಯಿತು. ಸರ್ಕಾರದಿಂದ ಗ್ರಾಮದ ಅಭಿವೃದ್ಧಿಗೆ ಬರುತ್ತಿರುವ ಯೋಜನೆಗಳನ್ನು ತಿಳಿಸಲಾಯಿತು. ಆರೋಗ್ಯ ಇಲಾಖೆಯ ನೇತ್ರ ಅವರು ಆರೋಗ್ಯ ಹಾಗೂ ಸ್ವಚ್ಚತೆಯ ಬಗ್ಗೆ ಮಾಹಿತಿ ನೀಡಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಕಿಲೆಂಜೂರು ಮಕ್ಕಳ ಹಕ್ಕುಗಳು ಎಂಬ ವಿಷಯದಲ್ಲಿ ಮಾತನಾಡಿ ಸೂಕ್ತ ಸಲಹೆಗಳನ್ನು ನೀಡಿದರಲ್ಲದೆ ಮಕ್ಕಳಿಂದಲೂ ಪ್ರಶ್ನೆ ಕೇಳಿಸಿ ಉತ್ತರ ನೀಡಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪ್ರಕಾಶ್, ಅಂಗನವಾಡಿ ಶಿಕ್ಷಕಿ ಭಾರತಿ, ಉಲ್ಲಂಜೆ ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್. ಭಟ್. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶರ್ಮಿಳಾ ಬಿ. ಅಮೀನ್, ಪೋಲೀಸ್ ಅಧಿಕಾರಿ ವಾಮನ್ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli12122013129

Comments

comments

Comments are closed.

Read previous post:
Kinnigoli12122013128
ಕಂಗುರಿ ಪೈಪ್ ಲೈನ್ ಗುದ್ದಲಿ ಪೂಜೆ

ಕಿನ್ನಿಗೋಳಿ: ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳಿಂಜೆ ಕಂಗುರಿ ಎಂಬಲ್ಲಿ ಜಿಲ್ಲಾ ಪಂಚಾಯಿತಿಯ ನಾಲ್ಕು ಲಕ್ಷ ಅನುದಾನದ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಗೆ ಜಿಲ್ಲಾ...

Close